ವಂದೇ ಭಾರತ್ ರೈಲು ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರ ಸರ್ಕಾರಿ ನೌಕರರು ತೇಜಸ್, ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ!

ರಜೆ ಪ್ರಯಾಣ ರಿಯಾಯಿತಿ (LTC) ಅಡಿಯಲ್ಲಿ ತೇಜಸ್, ವಂದೇ ಭಾರತ್ ಮತ್ತು ಹಮ್‌ಸಫರ್ ರೈಲುಗಳಲ್ಲಿ ಪ್ರಯಾಣಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಸ್ಪೀಡ್ ರೈಲುಗಳಾದ ತೇಜಸ್, ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲು ಸರ್ಕಾರ ಅನುಮತಿ ನೀಡಿದೆ. ರಜೆ ಪ್ರಯಾಣ ರಿಯಾಯಿತಿ (LTC) ಅಡಿಯಲ್ಲಿ ತೇಜಸ್, ವಂದೇ ಭಾರತ್ ಮತ್ತು ಹಮ್‌ಸಫರ್ ರೈಲುಗಳಲ್ಲಿ ಪ್ರಯಾಣಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.

ರಜೆ ಪ್ರಯಾಣ ರಿಯಾಯಿತಿಯಡಿ ವಿವಿಧ ಪ್ರಮುಖ ರೈಲುಗಳಲ್ಲಿ ಪ್ರಯಾಣದ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ವಿವಿಧ ಕಚೇರಿಗಳು, ವ್ಯಕ್ತಿಗಳಿಂದ ಹಲವು ಮನವಿಗಳನ್ನು ಸ್ವೀಕರಿಸಿದ ನಂತರ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

"ಈ ವಿಚಾರವನ್ನು ವೆಚ್ಚ ಇಲಾಖೆಯೊಂದಿಗೆ ಸಮಾಲೋಚಿಸಿ ಇಲಾಖೆಯು ಪರಿಶೀಲಿಸಿದ್ದು, ರಾಜಧಾನಿ, ಶತಾಬ್ದಿ ಮತ್ತು ದುರಂತೋ ರೈಲುಗಳನ್ನು ಹೊರತುಪಡಿಸಿ, ತೇಜಸ್ ಎಕ್ಸ್‌ಪ್ರೆಸ್, ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಹಮ್ಸಫರ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ರಜೆ ಪ್ರಯಾಣ ರಿಯಾಯಿತಿಯಡಿ ಸರ್ಕಾರಿ ನೌಕರರ ಪ್ರಯಾಣಕ್ಕೆ ಈಗ ಅನುಮತಿ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಅರ್ಹ ಕೇಂದ್ರ ಸರ್ಕಾರಿ ನೌಕರರು LTC+ ಪಡೆದಾಗ ರಜೆಯ ಜೊತೆಗೆ ಪ್ರಯಾಣಕ್ಕಾಗಿ ಖರೀದಿಸಿದ ಟಿಕೆಟ್‌ ಗೆ ಮರುಪಾವತಿ ಪಡೆಯುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!