ನಕ್ಸಲ್ ಎನ್ಕೌಂಟರ್ 
ದೇಶ

ಛತ್ತೀಸ್ ಗಢದಲ್ಲಿ ಮತ್ತೊಂದು ಎನ್ಕೌಂಟರ್: 12 ನಕ್ಸಲರು ಹತ

ಛತ್ತೀಸ್ ಗಢದ ದಕ್ಷಿಣ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಕಾಳಗ ನಡೆದಿದೆ.

ಬಿಜಾಪುರ: ಛತ್ತೀಸ್ ಗಢದಲ್ಲಿ ಗುರುವಾರ ಮತ್ತೊಂದು ಭೀಕರ ಎನ್ಕೌಂಟರ್ ನಡೆದಿದ್ದು, ಈ ಕಾರ್ಯಾಚರಣೆಯಲ್ಲಿ ಬರೊಬ್ಬರಿ 12 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ಛತ್ತೀಸ್ ಗಢದ ದಕ್ಷಿಣ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಹನ್ನೆರಡು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಈ ಪ್ರದೇಶದಲ್ಲಿ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಇಂದು ಬೆಳಿಗ್ಗೆ 9 ಗಂಟೆ ಸುಮಾರಿನಲ್ಲಿ ಎನ್‌ಕೌಂಟರ್ ಸಂಭವಿಸಿದೆ.

ಈ ಕಾರ್ಯಾಚರಣೆಯಲ್ಲಿ ಮೂರು ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (DRG), CRPF ನ ಗಣ್ಯ ಅರಣ್ಯ ಯುದ್ಧ ಘಟಕದ ಐದು ಬೆಟಾಲಿಯನ್‌ಗಳು, CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) 229 ನೇ ಬೆಟಾಲಿಯನ್ ಸಿಬ್ಬಂದಿ ಭಾಗವಹಿಸಿದ್ದರು.

ನಕ್ಸಲರ ಇರುವಿಕೆ ಪತ್ತೆಯಾಗುತ್ತಿದ್ದಂತೆಯೇ ಭದ್ರತಾ ಪಡೆಗಳು ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ 12 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇನ್ನು ಈ ತಿಂಗಳು ಬಿಜಾಪುರದಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದ್ದು, ಈ ಹಿಂದೆ ಜನವರಿ 12 ರಂದು, ಜಿಲ್ಲೆಯ ಮದ್ದೇಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಇದೇ ರೀತಿಯ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐದು ನಕ್ಸಲರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT