ಜೆ.ಪಿ. ನಡ್ಡಾ  
ದೇಶ

ದೆಹಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: 500 ರೂ ಗೆ ಎಲ್‌ಪಿಜಿ, ಮಹಿಳೆಯರಿಗೆ ತಿಂಗಳಿಗೆ 2500 ರೂ ಭರವಸೆ

ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.

ನವದೆಹಲಿ: ಫೆಬ್ರವರಿ 5 ರಂದು ನಡೆಯುವ ದೆಹಲಿ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ಪ್ರಣಾಳಿಕೆ 'ಸಂಕಲ್ಪ ಪತ್ರ'ವನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ತಿಂಗಳಿಗೆ 2500 ರೂ. ಹಾಗೂ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.

ಪಕ್ಷವು ಅಧಿಕಾರಕ್ಕೆ ಬಂದರೆ ಅಸ್ತಿತ್ವದಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವುದಾಗಿ ಮತ್ತು ಹಲವಾರು ಹೊಸ ಉಪಕ್ರಮಗಳನ್ನು ಪರಿಚಯಿಸುವುದಾಗಿ ನಡ್ಡಾ ಪ್ರತಿಜ್ಞೆ ಮಾಡಿದರು.

ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಸಾಧನೆಗಳನ್ನು ಎತ್ತಿ ತೋರಿಸಿದ ನಡ್ಡಾ, "ನಾವು 2014 ರಲ್ಲಿ 500 ಭರವಸೆಗಳನ್ನು ನೀಡಿದ್ದೇವೆ ಮತ್ತು ಆ ಪೈಕಿ 499 ಭರವಸೆಗಳನ್ನು ಈಡೇರಿಸಿದ್ದೇವೆ. 2019 ರಲ್ಲಿ, ನಾವು 235 ಭರವಸೆಗಳನ್ನು ನೀಡಿದ್ದೇವೆ ಮತ್ತು 225 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವು ಅನುಷ್ಠಾನ ಹಂತದಲ್ಲಿವೆ" ಎಂದರು.

ಮಹಿಳೆಯರ ಸಬಲೀಕರಣವು ಬಿಜೆಪಿಯ ಆದ್ಯತೆಯಾಗಿದೆ ಎಂದ ನಡ್ಡಾ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಂತೆ ದೆಹಲಿಯಲ್ಲಿಯೂ ನಾವು ಮಹಿಳೆಯರಿಗೆ ತಿಂಗಳಿಗೆ 2500 ರೂಪಾಯಿ ನೀಡುತ್ತೇವೆ ಮತ್ತು 500 ರೂ. ಗೆ ಎಲ್‌ಪಿಜಿ ಸಿಲಿಂಡರ್‌ ನೀಡುವುದಾಗಿಯೂ ಭರವಸೆ ನೀಡಿದರು.

ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಭರವಸೆಗಳು

  • ಮಹಿಳಾ ಸಮೃದ್ಧಿ ಯೋಜನೆಯಡಿ ದೆಹಲಿಯ ಮಹಿಳೆಯರಿಗೆ 2,500 ರೂ.

  • ದೆಹಲಿಯ ಬಡ ಮಹಿಳೆಯರಿಗೆ 500 ರೂ.ಗೆ ಎಲ್ ಪಿಜಿ ಸಿಲಿಂಡರ್

  • ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿ ತಾಯಂದಿರಿಗೆ 21,000 ರೂ. ನೀಡಲಾಗುವುದು.

  • ಮೊದಲ ಸಂಪುಟದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನ, ಹೆಚ್ಚುವರಿ ಆರೋಗ್ಯ ರಕ್ಷಣೆಗೆ 50,000 ರೂ.

  • 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,000-2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ.ಗಳನ್ನು ಪಡೆಯುವ ಪಿಂಚಣಿ ಯೋಜನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT