ಸಾಂದರ್ಭಿಕ ಚಿತ್ರ 
ದೇಶ

ಪತ್ನಿ, ಅತ್ತೆಯ ಕಿರುಕುಳ: ಬೆಂಗಳೂರು ಟೆಕ್ಕಿಯಂತೆ ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ!

ರಾಯ್‌ಗಢ ಜಿಲ್ಲೆಯ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್‌ಗಢ: ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಂತೆ ಮಧ್ಯಪ್ರದೇಶದಲ್ಲಿ 27 ವರ್ಷದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯ್‌ಗಢ ಜಿಲ್ಲೆಯ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರವಿ ಕಶ್ಯಪ್ ಭಾನುವಾರ ಬಿಯೋರಾ ಪಟ್ಟಣದ ತಮ್ಮ ಮನೆಯಲ್ಲಿ ಫ್ಯಾನ್‌ ಸೀಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕಶ್ಯಪ್ ತನ್ನ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಪತ್ನಿ ಮತ್ತು ಅತ್ತೆ ಮೇಲೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಬಿಯೋರಾ ನಗರ ಪೊಲೀಸ್ ಠಾಣೆಯ ಉಸ್ತುವಾರಿ ವೀರೇಂದ್ರ ಧಕಡ್ ಹೇಳಿದ್ದಾರೆ. ತನಿಖೆಯ ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ತನ್ನ ಹೆಂಡತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ತವರು ಮನೆಗೆ ಹೋಗುತ್ತಾಳೆ. ಹಿಂದಿರುಗಿದ ನಂತರ ನನ್ನ ಕುಟುಂಬದೊಂದಿಗೆ ಜಗಳವಾಡುತ್ತಾಳೆ. ಅತ್ತೆ ಕೂಡಾ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಪತ್ನಿಯನ್ನು ಮರಳಿ ಕರೆತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ ಆದರೆ ಆಕೆ ಒಂಟಿಯಾಗಿ ಬದುಕಲು ಬಯಸುತ್ತಿರುವುದಾಗಿ ಕಶ್ಯಪ್ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT