ಮಂಗಳವಾರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ತಮ್ಮ ನಿವಾಸಕ್ಕೆ ಆಗಮಿಸಿದ ನಟ ಸೈಫ್ ಅಲಿ ಖಾನ್. (Photo| ANI)
ದೇಶ

ಚಾಕು ದಾಳಿಗೆ ಒಳಗಾಗಿದ್ದ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಜನವರಿ 16 ರಂದು ಕಳ್ಳತನ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿ, ನಟನಿಗೆ ಚಾಕುವಿನಿಂದ ಆರು ಬಾರಿ ಇರಿದಿದ್ದನು.

ಮುಂಬೈ: ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ದರೋಡೆಕೋರನಿಂದ ಚಾಕು ದಾಳಿಗೆ ಒಳಗಾಗಿದ್ದ ನಟ ಸೈಫ್ ಅಲಿ ಖಾನ್ ಅವರು ಮಂಗಳವಾರ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜನವರಿ 16 ರಂದು ಕಳ್ಳತನ ಮಾಡುವ ಉದ್ದೇಶದಿಂದ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿ, ನಟನಿಗೆ ಚಾಕುವಿನಿಂದ ಆರು ಬಾರಿ ಇರಿದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ 54 ವರ್ಷದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಖಾನ್ ಅವರ ಕೈ, ಕುತ್ತಿಗೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿದ್ದವು. ವೈದ್ಯರು ಬೆನ್ನುಮೂಳೆಯಲ್ಲಿ ಸಿಲುಕಿದ್ದ ಚೂಪಾದ ಚಾಕುವನ್ನು ಹೊರ ತೆಗೆದಿದ್ದು, ಜನವರಿ 17 ರಂದು ತೀವ್ರ ನಿಗಾ ಘಟಕದಿಂದ(ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಗಿತ್ತು.

ಐದು ದಿನಗಳ ನಂತರ ಸೈಫ್ ಅಲಿ ಖಾನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

ಇರಿತದ ಘಟನೆಗೆ ಸಂಬಂಧಿಸಿದಂತೆ ನೆರೆಯ ಥಾಣೆ ನಗರದ ಬಾಂಗ್ಲಾದೇಶಿ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್(30) ಎಂಬ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video