ನಿತೀಶ್ ಕುಮಾರ್ 
ದೇಶ

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಜೆಡಿಯು

ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್ ನೇತೃತ್ವದ ಪಕ್ಷ ಬುಧವಾರ ತಿಳಿಸಿದೆ.

ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ.

ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್ ನೇತೃತ್ವದ ಪಕ್ಷ ಬುಧವಾರ ತಿಳಿಸಿದೆ.

ಆದಾಗ್ಯೂ, ಜೆಡಿಯು ಬೆಂಬಲ ಹಿಂಪಡೆದರೂ ಬಿರೇನ್ ಸಿಂಗ್ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಬಿಜೆಪಿ 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಹೊಂದಿದೆ ಮತ್ತು ನಾಗಾ ಪೀಪಲ್ಸ್ ಫ್ರಂಟ್‌ನ ಐದು ಶಾಸಕರು ಹಾಗೂ ಮೂವರು ಪಕ್ಷೇತರರ ಬೆಂಬಲ ಹೊಂದಿದೆ.

ಜೆಡಿಯು ರಾಜ್ಯಾಧ್ಯಕ್ಷ ಕ್ಷ ಬಿರೇನ್ ಸಿಂಗ್ ಅವರು ರಾಜ್ಯಪಾಲ ಭಲ್ಲಾ ಅವರಿಗೆ ಬರೆದ ಪತ್ರದಲ್ಲಿ, "ಫೆಬ್ರವರಿ/ಮಾರ್ಚ್ 2022 ರಲ್ಲಿ ನಡೆದ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ, ಜೆಡಿಯುನ ಆರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಕೆಲವು ತಿಂಗಳುಗಳ ನಂತರ, ಜೆಡಿಯುನ ಐದು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದು, ಈ ಐದು ಶಾಸಕರ ವಿಚಾರಣೆ ಸ್ಪೀಕರ್ ಮುಂದೆ ಬಾಕಿ ಇದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್