ಅಜಿತ್ ಪವಾರ್ 
ದೇಶ

ಜಲಗಾಂವ್ ರೈಲು ದುರಂತಕ್ಕೆ ಚಹಾ ಮಾರಾಟಗಾರನ ಬೆಂಕಿಯ ವದಂತಿಯೇ ಕಾರಣ: DCM ಅಜಿತ್ ಪವಾರ್

ಪ್ಯಾಂಟ್ರಿಯ ಚಹಾ ಮಾರಾಟಗಾರನೊಬ್ಬ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೂಗಿದ್ದಾನೆ, ಉತ್ತರ ಪ್ರದೇಶದ ಶ್ರಾವಸ್ತಿಯ ಇಬ್ಬರು ಪ್ರಯಾಣಿಕರು ಅದನ್ನು ಕೇಳಿಸಿಕೊಂಡು ಇತರರಿಗೆ ಈ ವದಂತಿಯನ್ನು ಹಬ್ಬಿಸಿದ್ದಾರೆ.

ಮುಂಬಯಿ: ರೈಲಿಗೆ ಬೆಂಕಿ ಬಿದ್ದಿದೆ ಎಂದು ಪುಷ್ಪಕ್ ಎಕ್ಸ್‌ಪ್ರೆಸ್‌ನೊಳಗೆ ಚಹಾ ಮಾರಾಟಗಾರನೊಬ್ಬ ಹಬ್ಬಿಸಿದ ವದಂತಿಯೇ ರೈಲು ಅಪಘಾತಕ್ಕೆ ಕಾರಣ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಬುಧವಾರ ಸಂಜೆ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಕ್ಕದ ಹಳಿಗಳ ಮೇಲೆ ಬೆಂಗಳೂರಿನಿಂದ ದೆಹಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಪ್ಯಾಂಟ್ರಿಯ ಚಹಾ ಮಾರಾಟಗಾರನೊಬ್ಬ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೂಗಿದ್ದಾನೆ, ಉತ್ತರ ಪ್ರದೇಶದ ಶ್ರಾವಸ್ತಿಯ ಇಬ್ಬರು ಪ್ರಯಾಣಿಕರು ಅದನ್ನು ಕೇಳಿಸಿಕೊಂಡು ಇತರರಿಗೆ ಈ ವದಂತಿಯನ್ನು ಹಬ್ಬಿಸಿದ್ದಾರೆ. ಇದರಿಂದ ಕೆಲವು ಪ್ರಯಾಣಿಕರು ಭಯಭೀತರಾಗಿ ರೈಲಿನಿಂದ ಹಾರಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಭಯಭೀತರಾದ ಕೆಲವು ಪ್ರಯಾಣಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ರೈಲಿನಿಂದ ಎರಡೂ ಬದಿಗಳಿಂದ ಜಿಗಿದಿದ್ದಾರೆ. ರೈಲು ವೇಗವಾಗಿ ಚಲಿಸುತ್ತಿದ್ದಂತೆ, ಒಬ್ಬ ಪ್ರಯಾಣಿಕರು ಸರಪಳಿ ಎಳೆದಿದ್ದಾರೆ. ರೈಲು ನಿಂತ ನಂತರ, ಜನರು ಕೆಳಗೆ ಇಳಿಯಲು ಪ್ರಾರಂಭಿಸಿದರು, ಪಕ್ಕದ ಹಳಿಯಲ್ಲಿ ವೇಗವಾಗಿ ಬಂದ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ ಎಂದು ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿದ 13 ಜನರಲ್ಲಿ 10 ಜನರನ್ನು ಗುರುತಿಸಲಾಗಿದೆ. ವದಂತಿ ಹರಡಿದ ಇಬ್ಬರು ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!