TNIE
ದೇಶ

London: ಥಿಯೇಟರ್ ಒಳ ನುಗ್ಗಿ 'Emergency' ಚಿತ್ರದ ವಿರುದ್ಧ ಖಲಿಸ್ತಾನಿಗಳಿಂದ ದಾಂಧಲೆ; ಬ್ರಿಟನ್ ವಿರುದ್ಧ ಭಾರತ ಖಂಡನೆ

'Emergency'ಯನ್ನು ವಿರೋಧಿಸಿ, ಖಾಲಿಸ್ತಾನ್ ಬೆಂಬಲಿಗರು ಲಂಡನ್‌ನ ಸಿನಿಮಾ ಮಂದಿರದಲ್ಲಿ ಗದ್ದಲ ಎಬ್ಬಿಸಿದ್ದು, ಅದರ ವಿಡಿಯೋ ಕೂಡ ಬಹಿರಂಗವಾಗಿದೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ 'Emergency' ಚಿತ್ರದ ಕುರಿತಂತೆ ವಿವಾದಗಳು ನಿಲ್ಲುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. 'ಎಮರ್ಜೆನ್ಸಿ' ಚಿತ್ರದ ಬಿಡುಗಡೆಗೂ ಮುನ್ನ ಸಾಕಷ್ಟು ಗದ್ದಲ ನಡೆದಿತ್ತು. ಇದೀಗ ಬಿಡುಗಡೆಯಾದ ನಂತರವೂ ಚಿತ್ರ ವಿವಾದಗಳಿಂದ ಸುತ್ತುವರೆದಿತ್ತು. ಈಗ ಚಿತ್ರಕ್ಕೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ವಿರೋಧ ವ್ಯಕ್ತವಾಗುತ್ತಿದೆ.

'Emergency'ಯನ್ನು ವಿರೋಧಿಸಿ, ಖಾಲಿಸ್ತಾನ್ ಬೆಂಬಲಿಗರು ಲಂಡನ್‌ನ ಸಿನಿಮಾ ಮಂದಿರದಲ್ಲಿ ಗದ್ದಲ ಎಬ್ಬಿಸಿದ್ದು, ಅದರ ವಿಡಿಯೋ ಕೂಡ ಬಹಿರಂಗವಾಗಿದೆ. ಖಲಿಸ್ತಾನಿ ಬೆಂಬಲಿಗರು ಚಿತ್ರಮಂದಿರಕ್ಕೆ ನುಗ್ಗಿ ಚಿತ್ರದ ಪ್ರದರ್ಶನವನ್ನು ತಡೆಯಲು ಪ್ರಯತ್ನಿಸಿದ್ದರು.

ಲಂಡನ್‌ನಲ್ಲಿ Emergency ಚಿತ್ರಕ್ಕೆ ಸಂಬಂಧಿಸಿದಂತೆ ಖಾಲಿಸ್ತಾನಿ ಬೆಂಬಲಿಗರು ಸೃಷ್ಟಿಸಿದ ಗದ್ದಲಕ್ಕೆ ವಿದೇಶಾಂಗ ಸಚಿವಾಲಯವೂ ಪ್ರತಿಕ್ರಿಯಿಸಿದೆ. ಹಲವಾರು ಥಿಯೇಟರ್ ಗಳಲ್ಲಿ 'ಎಮರ್ಜೆನ್ಸಿ' ಚಿತ್ರವನ್ನು ಪ್ರದರ್ಶಿಸುವುದನ್ನು ನಿಲ್ಲಿಸಲಾಗುತ್ತಿದೆ ಎಂಬ ಬಗ್ಗೆ ಹಲವಾರು ವರದಿಗಳನ್ನು ನಾವು ನೋಡಿದ್ದೇವೆ. ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಬೆದರಿಕೆಗಳ ನಿರಂತರ ಘಟನೆಗಳ ಬಗ್ಗೆ ನಾವು ಬ್ರಿಟನ್ ಸರ್ಕಾರದೊಂದಿಗೆ ಕಳವಳ ವ್ಯಕ್ತಪಡಿಸಿದ್ದೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಭಾರತ ವಿರೋಧಿ ಶಕ್ತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆಯ್ದುಕೊಂಡು ಚಲಾಯಿಸಲು ಸಾಧ್ಯವಿಲ್ಲ ಮತ್ತು ಅದಕ್ಕೆ ಅಡ್ಡಿಪಡಿಸುವವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ರಣಧೀರ್ ಜೈಸ್ವಾಲ್ ಹೇಳಿದರು. ಇದಕ್ಕೆ ಕಾರಣರಾದವರ ವಿರುದ್ಧ ಯುಕೆ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಲಂಡನ್‌ನಲ್ಲಿರುವ ನಮ್ಮ ಹೈಕಮಿಷನ್ ನಮ್ಮ ಸಮುದಾಯದ ಸದಸ್ಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದರು.

ಅದೇ ಸಮಯದಲ್ಲಿ, ಲಂಡನ್ ನಲ್ಲಿ ಕಂಗನಾ ರಣಾವತ್ ಅವರ Emergency ಸಿನಿಮಾದ ಬಗ್ಗೆ ಉಂಟಾದ ಗದ್ದಲದ ವಿಷಯವನ್ನು ಬ್ರಿಟಿಷ್ ಸಂಸತ್ತಿನಲ್ಲಿಯೂ ಪ್ರಸ್ತಾಪಿಸಲಾಯಿತು. ಕನ್ಸರ್ವೇಟಿವ್ ಪಕ್ಷದ ಸಂಸದ ಬಾಬ್ ಬ್ಲಾಕ್‌ಮನ್ ಸರ್ಕಾರವು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು. ಬ್ರಿಟಿಷ್ ಸಂಸದರ ಈ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ, ಕಂಗನಾ ಈ ವಿಷಯದ ಬಗ್ಗೆ ಭಾರತೀಯ ರಾಜಕಾರಣಿಗಳ 'ಮೌನ'ದ ಬಗ್ಗೆ ಕೋಪಗೊಂಡರು.

ನಟಿ ಟ್ವಿಟರ್‌ನಲ್ಲಿ ಬಾಬ್ ಬ್ಲ್ಯಾಕ್‌ಮನ್ ಅವರ ವೀಡಿಯೊವನ್ನು ಮರು ಹಂಚಿಕೊಂಡಿದ್ದು, "ಬ್ರಿಟಿಷ್ ಸಂಸದರು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿಗಾಗಿ ಧ್ವನಿ ಎತ್ತುತ್ತಾರೆ. ಏತನ್ಮಧ್ಯೆ, ಭಾರತೀಯ ರಾಜಕಾರಣಿಗಳು ಮತ್ತು ಸ್ತ್ರೀವಾದಿಗಳು ಮೌನವನ್ನು ಕಾಯ್ದುಕೊಂಡಿದ್ದಾರೆ ಎಂದು ಆರೋಪಿಸಿದರು.

'ಎಮರ್ಜೆನ್ಸಿ' ಚಿತ್ರದಲ್ಲಿ ಕಂಗನಾ ರನೌತ್ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು 1975-77ರ ಅವಧಿಯಲ್ಲಿ ಭಾರತದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ರಾಜಕೀಯ ಘಟನೆಗಳನ್ನು ಆಧರಿಸಿದೆ. ಈ ಚಿತ್ರದಲ್ಲಿ ಅನುಪಮ್ ಖೇರ್, ಶ್ರೇಯಸ್ ತಲ್ಪಡೆ, ವಿಶಾಕ್ ನಾಯರ್, ಮಹಿಮಾ ಚೌಧರಿ ಕೂಡ ನಟಿಸಿದ್ದಾರೆ. ಈ ಚಿತ್ರ ಜನವರಿ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT