ಸೈಫ್ ಅಲಿ ಖಾನ್ ಮೇಲೆ ದಾಳಿ ಪ್ರಕರಣದಲ್ಲಿ ಬಂಧಿತ ವ್ಯಕ್ತಿ online desk
ದೇಶ

ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಪ್ರಕರಣ: ಆರೋಪಿಗೆ ಜನವರಿ 29ರವರೆಗೆ ಪೊಲೀಸ್ ಕಸ್ಟಡಿ

ಪ್ರಕರಣದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಇತರ ಅಂಶಗಳ ಮೇಲೂ ತನಿಖೆ ಅಗತ್ಯ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಅಪರಾಧವು ಗಂಭೀರವಾಗಿದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಹೇಳಿದೆ.

ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿಯ ಪೊಲೀಸ್ ಕಸ್ಟಡಿಯನ್ನು ಜನವರಿ 29ರವರೆಗೆ ವಿಸ್ತರಿಸಿ ಬಾಂದ್ರಾ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಪ್ರಕರಣದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಇತರ ಅಂಶಗಳ ಮೇಲೂ ತನಿಖೆ ಅಗತ್ಯ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಅಪರಾಧವು ಗಂಭೀರವಾಗಿದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಹೇಳಿದೆ.

ಆರೋಪಿಯ ನಿರಪರಾಧಿತ್ವವನ್ನು ಖಚಿತಪಡಿಸಿಕೊಳ್ಳಲು ಇಂತಹ ತನಿಖೆ ಅವಶ್ಯಕವಾಗಿದೆ. ಆದ್ದರಿಂದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 35ರ ಅಡಿಯಲ್ಲಿ ನೋಟಿಸ್‌ಗೆ ಸಂಬಂಧಿಸಿದ ಸಲ್ಲಿಕೆಗಳು ಅನ್ವಯಿಸುವುದಿಲ್ಲ. ಯಾವುದೇ ದಾಖಲೆಗಳಿಂದ ಬಂಧನ ಕಾನೂನುಬಾಹಿರ ಎಂದು ತೀರ್ಮಾನಿಸಲು ಆಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಚಾಕು ಇರಿತ ಪ್ರಕರಣದಲ್ಲಿ ಹೆಚ್ಚಿನ ಸಹಚರರು ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿ, ಮುಂಬೈ ಪೊಲೀಸರು ಆರೋಪಿಯನ್ನು ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಆರೋಪಿಯು ಅಪರಾಧಕ್ಕೆ ಬಳಸಿದ ಆಯುಧದ ಮೂಲದ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಸಿಸಿಟಿವಿ ಫೂಟೇಜ್‌ನೊಂದಿಗೆ ಮುಖ ಗುರುತಿಸುವಿಕೆ ಪ್ರಕ್ರಿಯೆಯನ್ನು ಮಾಡಬೇಕಾಗಿದೆ ಮತ್ತು ಇದಕ್ಕಾಗಿ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಅಪರಾಧದ ಸಮಯದಲ್ಲಿ ಆತ ಧರಿಸಿದ್ದ ಶೂಗಳನ್ನು ಇನ್ನೂ ವಶಕ್ಕೆ ಪಡೆಯಬೇಕಾಗಿದೆ' ಎಂದು ಪೊಲೀಸರು ಸೇರಿಸಿದ್ದಾರೆ.

ಆರೋಪಿಯು ಅಪರಾಧದ ವೇಳೆ ಬಳಸಿದ್ದ ಶಾಲನ್ನು (ಗಮ್ಛಾ) ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT