ಯಮುನಾ ನದಿಯಲ್ಲಿ ಕೇಜ್ರಿವಾಲ್ ಪ್ರತಿಕೃತಿಯೊಂದಿಗೆ ಬಿಜೆಪಿ ನಾಯಕ ಪರ್ವೇಶ್ ವರ್ಮಾ 
ದೇಶ

ದೆಹಲಿ ಚುನಾವಣೆ: ಯಮುನಾ ನದಿ ನೀರಿನಲ್ಲಿ 'ಕೇಜ್ರಿವಾಲ್ ಪ್ರತಿಕೃತಿ' ಮುಳುಗಿಸಿದ ಬಿಜೆಪಿ ನಾಯಕ!

2025ರೊಳಗೆ ನದಿಯನ್ನು ಶುದ್ದೀಕರಿಸುವುದಾಗಿ ಕೇಜ್ರಿವಾಲ್ ಹೇಳಿದ್ದರು. ಆದರೆ, ಪರಿಸ್ಥಿತಿ ಹದಗೆಟ್ಟಿದೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ AAP ಹಾಗೂ ಬಿಜೆಪಿ ನಡುವೆ ವಾಕ್ಸಮರ, ಆರೋಪ, ಪ್ರತ್ಯಾರೋಪ ಜೋರಾಗಿ ನಡೆಯುತ್ತಿದೆ. ಯಮುನಾ ನದಿ ಶುದ್ಧೀಕರಿಸುವುದಾಗಿ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಶನಿವಾರ ಕೇಜ್ರಿವಾಲ್ ಪ್ರತಿಕೃತಿಯನ್ನು ಯುಮುನಾ ನದಿಯ ಕೆಸರಿನ ನೀರಿನಲ್ಲಿ ಮುಳುಗಿಸುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರ್ವೇಶ್ ವರ್ಮಾ, ಯುಮುನಾ ನದಿ ಶುದ್ಧೀಕರಿಸುವುದಾಗಿ ನೀಡಿದ್ದ ಭರವಸೆ ಈಡೇರಿಸುವಲ್ಲಿ ಕೇಜ್ರಿವಾಲ್ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. 11 ವರ್ಷಗಳ ಕಾಲ ಅಧಿಕಾರದಲ್ಲಿದ್ದು, ರೂ.8,000 ವೆಚ್ಚ ಮಾಡಿದ್ದರೂ ಯುಮುನಾ ನದಿ ಶುದ್ಧೀಕರಣ ಕುರಿತು ನೀಡಿದ್ದ ಭರವಸೆ ಈಡೇರಿಸುವಲ್ಲಿ AAP ಸರ್ಕಾರ ವಿಫಲವಾಗಿದೆ. ಇದು ದೆಹಲಿ ಜನತೆಗೆ ಮಾಡಿದ ಮಹಾದ್ರೋಹ ಎಂದರು.

2025ರೊಳಗೆ ನದಿಯನ್ನು ಶುದ್ದೀಕರಿಸುವುದಾಗಿ ಕೇಜ್ರಿವಾಲ್ ಹೇಳಿದ್ದರು. ಆದರೆ, ಪರಿಸ್ಥಿತಿ ಹದಗೆಟ್ಟಿದೆ. ಅವರ ಪ್ರತಿಕೃತಿ ಮುಳುಗಿಸುವುದರೊಂದಿಗೆ ದೆಹಲಿ ಜನರಿಗೆ ಅವರ ವಿಫಲತೆಯನ್ನು ತೋರಿಸಿದ್ದೇವೆ ಎಂದು ತಿಳಿಸಿದರು.

ಚುನಾವಣಾ ಪ್ರಚಾರದ ವೇಳೆಯನ್ನು ತನ್ನ ತಪ್ಪನ್ನುಕೇಜ್ರಿವಾಲ್ ಒಪ್ಪಿಕೊಳ್ಳುತ್ತಿದ್ದು, ದೆಹಲಿಯಲ್ಲಿ ಮತ್ತೆ ಎಎಪಿ ಅಧಿಕಾರಕ್ಕೆ ಬಂದ ನಂತರ ಮುಂದಿನ ಎರಡ್ಮೂರು ವರ್ಷಗಳಲ್ಲಿ ನದಿ ಶುದ್ಧೀಕರಿಸುವುದಾಗಿ ಜನರಿಗೆ ಭರವಸೆ ನೀಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಬರೀ ಸುಳ್ಳು ಹೇಳಿಕೆ, ಪೊಳ್ಳು ಭರವಸೆ ನೀಡುವುದರಲ್ಲಿಯೇ ಕಾಲ ಕಳೆದರು ಎಂದು ವರ್ಮಾ ವಾಗ್ದಾಳಿ ನಡೆಸಿದರು.

ದೆಹಲಿಯನ್ನು ಪೊಳ್ಳಿನ ಭರವಸೆಯಿಂದ ಮುಕ್ತಗೊಳಿಸುವ ಸಮಯ ಎಂದು ಜನರಿಗೆ ನೆನಪಿಸಲು ಯಮುನಾ ನದಿಯಲ್ಲಿ ಕೇಜ್ರಿವಾಲ್ ಪ್ರತಿಕೃತಿ ಮುಳುಗಿಸಲಾಗಿದೆ. ಈ ಮೂಲಕ "ಸುಳ್ಳು ಮತ್ತು ಪ್ರಚಾರದ" ರಾಜಕೀಯ ಮುಂದುವರಿಯುವವರೆಗೆ ದೆಹಲಿಯ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT