ಮಹಾಕುಂಭ ಮೇಳದ ಚಿತ್ರ 
ದೇಶ

Maha Kumbh Mela: ಪವಿತ್ರ ಸ್ನಾನಕ್ಕಾಗಿ ಫೆಬ್ರವರಿ 1 ರಂದು 73 ರಾಷ್ಟ್ರಗಳ ರಾಯಭಾರಿಗಳ ಆಗಮನ!

ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳು ಸೇರಿದಂತೆ 73 ದೇಶಗಳ ರಾಜತಾಂತ್ರಿಕರು ಇದೇ ಮೊದಲ ಬಾರಿಗೆ ಕುಂಭ ಮೇಳದಲ್ಲಿ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಮೇಳದ ವೇಳೆ ಸಂಗಮದಲ್ಲಿ ಸ್ನಾನ ಮಾಡಲು ವಿವಿಧ ದೇಶಗಳ ರಾಯಭಾರಿಗಳು ಆಗಮಿಸುತ್ತಿದ್ದಾರೆ.

ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳು ಸೇರಿದಂತೆ 73 ದೇಶಗಳ ರಾಜತಾಂತ್ರಿಕರು ಇದೇ ಮೊದಲ ಬಾರಿಗೆ ಕುಂಭ ಮೇಳದಲ್ಲಿ ಸ್ನಾನ ಮಾಡಲು ಆಗಮಿಸುತ್ತಿದ್ದು, ಅವರು ಫೆಬ್ರವರಿ 1 ರಂದು ಬರಲಿದ್ದಾರೆ ಎಂದು ಮೇಳದ ಅಧಿಕಾರಿ ವಿಜಯ್ ಕಿರಣ್ ಆನಂದ್ ಖಚಿತಪಡಿಸಿದ್ದಾರೆ.

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA)ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನೂ ಬರೆದಿದ್ದು, ಜಪಾನ್, ಯುಎಸ್ಎ, ರಷ್ಯಾ, ಉಕ್ರೇನ್, ಜರ್ಮನಿ, ನೆದರ್ಲ್ಯಾಂಡ್ಸ್, ಕ್ಯಾಮರೂನ್, ಕೆನಡಾ, ಸ್ವಿಟ್ಜರ್ಲೆಂಡ್, ಸ್ವೀಡನ್, ಪೋಲೆಂಡ್, ಬೊಲಿವಿಯಾ ಸೇರಿದಂತೆ ವಿವಿಧ ರಾಷ್ಟ್ರಗಳ ರಾಜತಾಂತ್ರಿಕರು ಮಹಾ ಕುಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಎಲ್ಲಾ ವಿದೇಶಿ ರಾಜತಾಂತ್ರಿಕರು ದೋಣಿ ಮೂಲಕ ಸಂಗಮ ತಲುಪಲಿದ್ದು, ಪವಿತ್ರ ಸ್ನಾನ ಮಾಡುತ್ತಾರೆ. ತದನಂತರ ಅವರು ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ. ಡಿಜಿಟಲ್ ಮಹಾಕುಂಭ ಅನುಭವ ಕೇಂದ್ರದಲ್ಲಿ ಮಹಾ ಕುಂಭ ಮೇಳ ಕುರಿತು ಅರಿತುಕೊಳ್ಳಲಿದ್ದಾರೆ. ಎಂಇಎ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳು ರಾಜತಾಂತ್ರಿಕರಿಗೆ ಸುಗಮ ಅನುಭವ ಖಾತ್ರಿಗಾಗಿ ಸಿದ್ಧತೆಗಳಲ್ಲಿ ನಿರತರಾಗಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT