ಅಖಿಲೇಶ್ ಯಾದವ್ 
ದೇಶ

Maha Kumbh Mela: ತ್ರಿವೇಣಿ ಸಂಗಮದಲ್ಲಿ ಅಖಿಲೇಶ್ ಯಾದವ್ ಪವಿತ್ರ ಸ್ನಾನ!

ಸಂಪ್ರದಾಯದಂತೆ ಸಂಗಮದಲ್ಲಿ 11 ಬಾರಿ ಸ್ನಾನ ಮಾಡುವ ಅವಕಾಶ ಸಿಕ್ಕಿದೆ. 144 ವರ್ಷಗಳ ನಂತರ ಈ ಮಹಾಕುಂಭ ಮೇಳ ನಡೆಯುತ್ತಿದೆ.

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ವೇಳೆ ತ್ರಿವೇಣಿ ಸಂಗಮದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಪವಿತ್ರ ಸ್ನಾನ ಮಾಡಿದ್ದಾರೆ.

ಮಧ್ಯಾಹ್ನ ಮಹಾಕುಂಭ ನಗರಕ್ಕೆ ಆಗಮಿಸಿದ ಯಾದವ್ ಪವಿತ್ರ ಸ್ನಾನ ಮಾಡಿದ್ದಾರೆ. ಈ ಕುರಿತ ಫೋಟೋಗಳನ್ನು ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಸ್ನಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಸಂಪ್ರದಾಯದಂತೆ ಸಂಗಮದಲ್ಲಿ 11 ಬಾರಿ ಸ್ನಾನ ಮಾಡುವ ಅವಕಾಶ ಸಿಕ್ಕಿದೆ. 144 ವರ್ಷಗಳ ನಂತರ ಈ ಮಹಾಕುಂಭ ಮೇಳ ನಡೆಯುತ್ತಿದೆ. ಸಾಮರಸ್ಯ, ಸದ್ಭಾವನೆ ಸಹಿಷ್ಣುತೆಯೊಂದಿಗೆ ಎಲ್ಲರೂ ಮುಂದುವರಿಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದು, ಜನರ ಕಲ್ಯಾಣಕ್ಕಾಗಿ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.

ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಯಾದವ್ ಸ್ನಾನ ಮಾಡಿದ್ದರು.

ಈ ತಿಂಗಳ ಆರಂಭದಲ್ಲಿ ಪ್ರಯಾಗ್‌ರಾಜ್‌ನಲ್ಲಿರುವ ಮಹಾಕುಂಭಕ್ಕೆ ಭೇಟಿ ನೀಡುತ್ತೀರಾ ಎಂಬ ಪ್ರಶ್ನೆಗೆ ಯಾವಾಗಲೂ ಕುಂಭ ಮೇಳಕ್ಕೆ ಹೋಗುತ್ತೇನೆ. ಕೆಲವರು ಪುಣ್ಯ ಪಡೆಯಲು ಗಂಗಾ ಸ್ನಾನಕ್ಕೆ ಹೋಗುತ್ತಾರೆ, ಕೆಲವರು ದಾನ ನೀಡಲು ಹೋಗುತ್ತಾರೆ. ಮತ್ತೆ ಕೆಲವರು ತಮ್ಮ ಪಾಪವನ್ನು ತೊಳೆಯಲು ಹೋಗುತ್ತಾರೆ. ನಾವು ಪುಣ್ಯ ಮತ್ತು ದಾನಕ್ಕಾಗಿ ಹೋಗುತ್ತೇವೆ" ಎಂದು ಅವರು ಹೇಳಿದ್ದರು. 2019 ರಲ್ಲಿ, ಯಾದವ್ ಅರ್ಧ ಕುಂಭದ ಸಮಯದಲ್ಲಿ ಪ್ರಯಾಗರಾಜ್‌ನಲ್ಲಿ ಸ್ನಾನ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT