ಸಂಗ್ರಹ ಚಿತ್ರ 
ದೇಶ

ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ: ಪ್ರಧಾನಿ ಮೋದಿ ಶುಭಾಶಯ; ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ಧಚಿತ್ರ-ಸೇನಾ ಪರೇಡ್'ಗೆ ಕ್ಷಣಗಣನೆ

ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್​ಪಥ್​) ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ನವದೆಹಲಿ: ದೇಶಾದ್ಯಂತ 76ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ದೇಶದ ಎಲ್ಲಾ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

ಇಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲಾ ಜನತೆಗೂ ತಲೆಬಾಗಿ ನಮಸ್ಕರಿಸುತ್ತೇನೆ. ಈ ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವಸ, ಬಲಿಷ್ಠ ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ ಎಂದು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್​ಪಥ್​) ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛ ಇರಿಸಿದ ನಂತರ ದ್ರೌಪದಿ ಮುರ್ಮು ಅವರುಪ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ.

ಪ್ರತಿ ವರ್ಷ ಗಣರಾಜ್ಯೋತ್ಸವಕ್ಕೆ ಒರ್ವ ವಿದೇಶಿ ಗಣ್ಯ ವ್ಯಕ್ತಿಯನ್ನು ಅತಿಥಿಯಾಗಿ ಆಹ್ವಾನಿಸಲಾಗುತ್ತದೆ. ಈ ವರ್ಷ, ಇಂಡೋನೇಷ್ಯಾಕ್ಕೆ ಇತ್ತೀಚೆಗೆ ಆಯ್ಕೆಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ದೆಹಲಿಯಲ್ಲಿ ಹೆಚ್ಚಿದ ಭದ್ರತೆ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಸೇನೆ, ಖಾಕಿ ಕೋಟೆಯೇ ನಿರ್ಮಾಣವಾಗಿದ್ದು, ಡ್ರೋಣ್ ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗಿದೆ. ಎಲ್ಲೆಲ್ಲೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವವರಿಗೆ, ತಿಂಡಿ, ನೀರಿನ ಬಾಟಲ್, ಗನ್, ಚಾಕು, ಚೂಪಾದ ವಸ್ತುಗಳು, ಕೊಡೆ, ಕಪ್ಪುವಸ್ತ್ರ, ಕ್ಯಾಮೆರಾ, ರೇಡಿಯೋ, ಸ್ಯೂಟ್‌ಕೇಸ್, ಬ್ಯಾಗ್, ಸಿಗರೇಟ್, ಬೀಡಿ, ಬೆಂಕಿಪೊಟ್ಟಣ, ಅಗ್ನಿಕಾರಕ ವಸ್ತುಗಳನ್ನು ನಿಷೇಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

SCROLL FOR NEXT