ಮಗು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ 
ದೇಶ

ಪವಾಡ: 13ನೇ ಅಂತಸ್ತಿನಿಂದ ಬಿದ್ದ ಮಗುವಿನ ರೋಚಕ ರಕ್ಷಣೆ! ವಿಡಿಯೋ ವೈರಲ್

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಮಗು ಕಾಪಾಡಿದ ವ್ಯಕ್ತಿ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಥಾಣೆ: ಫ್ಲಾಟ್ ವೊಂದರ 13 ನೇ ಅಂತಸ್ತಿನ ಬಾಲ್ಕನಿಂದ ಕೆಳಗೆ ಬಿದ್ದರೂ ಎರಡು ವರ್ಷದ ಮಗುವೊಂದು ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಕಳೆದ ವಾರ ಡೊಂಬಿವಲಿಯಲ್ಲಿ ದೇವಿಚಪದ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಗು ಕೆಳಗೆ ಬೀಳುತ್ತಿರುವುದನ್ನು ನೋಡಿದ ವ್ಯಕ್ತಿಯೋರ್ವ ಕೂಡಲೇ ಮಗು ಬೀಳಬಹುದಾದ ಸ್ಥಳಕ್ಕೆ ಧಾವಿಸಿದ್ದು, ಕ್ಯಾಚ್ ಹಿಡಿಯಲು ಯತ್ನಿಸುವ ಮೂಲಕ ಮಗವನ್ನು ರಕ್ಷಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಮಗು ಕಾಪಾಡಿದ ವ್ಯಕ್ತಿ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಅವರನ್ನು ನಿಜ ಜೀವನದ ಹೀರೋ ಎಂದು ನೆಟ್ಟಿಗರು ಕೊಂಡಾಡಿದ್ದಾರೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋದಲ್ಲಿ ಭಾವೇಶ್ ಮ್ಹಾತ್ರೆ ಮಗುವನ್ನು ಹಿಡಿಯಲು ಓಡುತ್ತಿರುವುದನ್ನು ಕಾಣಬಹುದಾಗಿದೆ. ಆತ ಮಗು ಎಲ್ಲಿ ಬೀಳುತ್ತದೆ ಎಂಬುದನ್ನು ಗ್ರಹಿಸುವಲ್ಲಿ ವಿಫಲವಾದರೂ ಕ್ಯಾಚ್ ಹಿಡಿಯಲು ಪ್ರಯತ್ನದಲ್ಲಿ ಮಗು ಕೆಳಗೆ ಬಿದ್ದಿದೆ. ಆದರೆ ಸಣ್ಣಪುಟ್ಟ ಗಾಯಗಳೊಂದಿಗೆ ಮಗು ಪ್ರಾಣಾಪಾಯದಿಂದ ಪಾರಾಗಿದೆ. 13ನೇ ಮಹಡಿಯ ಫ್ಲಾಟ್‌ನ ಬಾಲ್ಕನಿಯಲ್ಲಿ ಆಟವಾಡುತ್ತಿದ್ದಾಗ ಮಗು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!