ಪತ್ರಕರ್ತೆ ರಾಣಾ ಅಯ್ಯೂಬ್ 
ದೇಶ

'ಹಿಂದೂ ದೇವತೆಗಳಿಗೆ ಅಪಮಾನ, ಭಾರತ-ವಿರೋಧಿ ಪ್ರಚೋದನೆ': ಪತ್ರಕರ್ತೆ Rana Ayyub ವಿರುದ್ಧ FIR, ದೆಹಲಿ ಕೋರ್ಟ್ ಆದೇಶ!

1 ಕೋಟಿ ರೂ. ಗೂ ಹೆಚ್ಚಿನ ಹಣದ ಅವ್ಯವಹಾರದ ಗಂಭೀರ ಅಪರಾಧ ಪ್ರಕರಣದಲ್ಲಿ ರಾಣಾ ಭಾಗಿಯಾಗಿದ್ದಾರೆ ಎಂದು ಈ ಹಿಂದೆ ಜಾರಿ ನಿರ್ದೇಶನಾಲಯ ಹೇಳಿತ್ತು.

ನವದೆಹಲಿ: ಹಿಂದೂ ದೇವತೆಗಳಿಗೆ ಅಪಮಾನ, ದೇಶ ವಿರೋಧಿ ಭಾವನೆ ಹರಡುವಿಕೆ ಮತ್ತು ಧಾರ್ಮಿಕ ವಿಚಾರಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದ ಮೇಲೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ FIR ದಾಖಲಿಸುವಂತೆ ದೆಹಲಿ ಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಹೌದು.. 2016-17ರಲ್ಲಿ ಮಾಡಿರುವ ಸಾಮಾಜಿಕ ಜಾಲತಾಣಗಳಲ್ಲಿನ ಕೆಲ ಪೋಸ್ಟ್ ಗಳಿಗೆ ಸಂಬಂಧಿಸಿ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ದಿಲ್ಲಿ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ. ಹಿಂದೂ ದೇವತೆಗಳಿಗೆ ಅವಮಾನ, ಭಾರತ ವಿರೋಧಿ ಭಾವನೆ ಪ್ರಚಾರ, ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಲ್ಲಿ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸೂಚಿಸಿದ್ದು, ಈ ಕುರಿತು ನ್ಯಾಯಯುತವಾಗಿ ತನಿಖೆ ನಡೆಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ರಾಣಾ ಅಯ್ಯೂಬ್ ವಿರುದ್ಧ ಎಫ್ ಐಆರ್ ದಾಖಲಿಸಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿ ವಕೀಲರೋರ್ವರು ದೆಹಲಿ ಕೋರ್ಟ್ ಮೊರೆ ಹೋಗಿದ್ದರು. ಅಯ್ಯೂಬ್ ಅವರು ಎಕ್ಸ್ ನಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಹಿಮಾಂಶು ರಮಣ್ ಸಿಂಗ್ ಅವರು ಅಯ್ಯೂಬ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ನಿರ್ದೇಶನ ಕೋರಿ ವಕೀಲರೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಅಯ್ಯೂಬ್ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ‍ಪ್ರಚೋದಿಸುವಿಕೆ), 295 ಎ (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು), 505ರ (ಸಾರ್ವಜನಿಕವಾಗಿ ಕಿಡಿಗೇಡಿತನದ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಯುತವಾಗಿ ತನಿಖೆ ನಡೆಸುವಂತೆ ದಕ್ಷಿಣ ದೆಹಲಿಯ ಸೈಬರ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ರಮಣ್ ಸಿಂಗ್ ಅವರು ಸೂಚಿಸಿದ್ದಾರೆ.

ಇಡಿ ಮಧ್ಯ ಪ್ರವೇಶ

ಇನ್ನು 2022ರಲ್ಲಿ ಸುಮಾರು 1 ಕೋಟಿ ರೂಗೂ ಹೆಚ್ಚಿನ ಹಣದ ಅವ್ಯವಹಾರದ ಗಂಭೀರ ಅಪರಾಧ ಪ್ರಕರಣದಲ್ಲಿ ರಾಣಾ ಭಾಗಿಯಾಗಿದ್ದಾರೆ ಎಂದು ಈ ಹಿಂದೆ ಜಾರಿ ನಿರ್ದೇಶನಾಲಯವು ಹೈಕೋರ್ಟ್‌ ಗಮನಕ್ಕೆ ತಂದಿತ್ತು. ಕೋವಿಡ್ ಪರಿಹಾರಕ್ಕೆ ಸಂಬಂಧಿಸಿದಂತೆ ಸಂಗ್ರಹಿಸಲಾದ ಹಣದಲ್ಲಿ ರಾಣಾ ಅವರು ಒಂದು ಕೋಟಿ ರೂಪಾಯಿಗೂ ಹೆಚ್ಚಿನ ಹಣ ದುರುಪಯೋಗಪಡಿಸಿಕೊಂಡಿದ್ದಾರೆ.

ಅವರು ಡಾಲರ್ ರೂಪದಲ್ಲೂ ಹಣ ಸ್ವೀಕರಿಸಿದ್ದಾರೆ. ಇದಕ್ಕಾಗಿ ರಾಣಾ ಕೆಲವು ನಕಲಿ ಬಿಲ್‌ಗಳನ್ನೂ ಸಲ್ಲಿಸಿದ್ದಾರೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಮತ್ತು ಇ.ಡಿ ಪರ ವಕೀಲ ಅಮಿತ್ ಮಹಾಜನ್ ಅವರು ನ್ಯಾಯಾಲಯದಲ್ಲಿ ಪ್ರತಿಪಾದಿಸಿದ್ದರು. 2022ರ ಮಾರ್ಚ್ 29ರಂದು ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಭಾಗಹಿಸಲು ರಾಣಾ ಅವರು ಲಂಡನ್‌ಗೆ ತೆರಳಬೇಕಿತ್ತು. ಆದರೆ, ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT