ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಕೋವಿಂದ್ ಪಾಲ್ಗೊಂಡಿದ್ದರು 
ದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬಂದರೆ ಅದು ದೇಶದ ದಿಕ್ಕನ್ನೇ ಬದಲಾಯಿಸುತ್ತದೆ: Ramanath Kovind

ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆ ಜಾರಿಗೆ ಬಂದರೆ, ಪದೇ ಪದೇ ಚುನಾವಣೆಗಳಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಆಗುವ ಸಮಸ್ಯೆ ಕಡಿಮೆಯಾಗುತ್ತದೆ.

ಸೇಡಂ: 'ಒಂದು ರಾಷ್ಟ್ರ-ಒಂದು ಚುನಾವಣೆ' ಪರಿಕಲ್ಪನೆಯನ್ನು ಜಾರಿಗೆ ತಂದರೆ ಅದು ದೇಶದ ದಿಕ್ಕನ್ನೇ ಬದಲಾಯಿಸುತ್ತದೆ' ಎಂದು ಭಾರತದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಬುಧವಾರ (ಜ.29) ರಂದು ಸೇಡಂ ಬಳಿ ನಡೆದ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಕೋವಿಂದ್, ಒಂದು ದೇಶ, ಒಂದು ಚುನಾವಣೆಯಿಂದ ಸಮಯ, ಶಕ್ತಿ ಮತ್ತು ಹಣವನ್ನು ಉಳಿಸಲು ಸಾಧ್ಯವಾಗುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರಿಗೆ ವರದಾನವಾಗಲಿದೆ ಎಂದು ಕೋವಿಂದ್ ಹೇಳಿದ್ದಾರೆ.

ದೇಶದ ಮಾಜಿ ರಾಷ್ಟ್ರಪತಿಗಳು ತಮ್ಮ ಅಧ್ಯಕ್ಷತೆಯ ಸಮಿತಿ ಸಲ್ಲಿಸಿದ ವರದಿಯಲ್ಲಿ, ಸಂಸತ್ತು, ಶಾಸಕಾಂಗ ಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು 100 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆ ಜಾರಿಗೆ ಬಂದರೆ, ಪದೇ ಪದೇ ಚುನಾವಣೆಗಳಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಆಗುವ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಅದು ಸಮಯ, ಶಕ್ತಿ ಮತ್ತು ಹಣವನ್ನು ಉಳಿಸುತ್ತದೆ ಎಂದು ಕೋವಿಂದ್ ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿ 18526 ಪುಟಗಳ ವರದಿಯನ್ನು ಸಲ್ಲಿಸಿದೆ ಎಂದು ಹೇಳಿದರು. ವರದಿ ಸಲ್ಲಿಸುವ ಮೊದಲು, ಸಮಿತಿಯು ತಜ್ಞರು, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಬಹುತೇಕ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

SCROLL FOR NEXT