ಮಹಾಕುಂಭ ಮೇಳ 2025 online desk
ದೇಶ

Maha Kumbh 2025: 16 ದಿನಗಳಲ್ಲಿ 14 ಕೋಟಿ ಮಂದಿ ಅಮೃತ ಸ್ನಾನ; ಜನವರಿ 29 ರಂದು ಒಂದೇ ದಿನ 10 ಕೋಟಿ ತಲುಪುವ ಸಾಧ್ಯತೆ!

ಜ.13 ರಂದು ಕುಂಭಮೇಳ ಪ್ರಾರಂಭವಾದಾಗಿನಿಂದಲೂ ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಮಂದಿ (147.6) ಮಿಂದೆದ್ದಿದ್ದಾರೆ.

ಪ್ರಯಾಗ್ ರಾಜ್: ಮಹಾಕುಂಭ ಮೇಳ 2025 (Maha kumbh 2025) ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲು ಜನಸಾಗರ ಹರಿದುಬರುತ್ತಿದೆ.

ಉತ್ತರ ಪ್ರದೇಶ ಸರ್ಕಾರದ ಮಾಹಿತಿಯ ಪ್ರಕಾರ ಮಂಗಳವಾರ ಮಧ್ಯಾಹ್ನದವರೆಗೂ ತ್ರಿವೇಣಿ ಸಂಗಮದಲ್ಲಿ ಒಟ್ಟು 2.39 ಕೋಟಿ ಮಂದಿ ಅಮೃತ ಸ್ನಾನ ಮಾಡಿದ್ದಾರೆ. ಈ ಪೈಕಿ 1 ಕೋಟಿ ಕಲ್ಪವಾಸಿಗಳೂ ಸೇರಿದ್ದಾರೆ.

ಇನ್ನು ಜ.13 ರಂದು ಕುಂಭಮೇಳ ಪ್ರಾರಂಭವಾದಾಗಿನಿಂದಲೂ ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಮಂದಿ (147.6) ಮಿಂದೆದ್ದಿದ್ದಾರೆ. ಜ.29 ರಂದು ಎರಡನೇ ಅಮೃತ ಸ್ನಾನ ನಡೆಯುತ್ತಿದ್ದು, 10 ಕೋಟಿ ಮಂದಿ ಇದರಲ್ಲಿ ಭಾಗಿಯಾಗಲಿದ್ದಾರೆ ಎಂಬ ನಿರೀಕ್ಷೆ ಇದೆ ಈ ಸಂಖ್ಯೆ ದಾಟಿದರೆ, ಕುಂಭಮೇಳದ ಮೊದಲ 15 ದಿನಗಳಲ್ಲಿ ಅಮೃತ ಸ್ನಾನ ಮಾಡಿದ ಭಕ್ತಾದಿಗಳ ಸಂಖ್ಯೆ 15 ಕೋಟಿಯನ್ನು ಮೀರಲಿದೆ.

ಫೆ.3, ಫೆ.12, ಫೆ.26 ರಂದು ಪವಿತ್ರ ಸ್ನಾನಗಳು ನಡೆಯಲಿವೆ.

ಜ.29 ರಂದು ಅಮೃತ ಸ್ನಾನದ ಹಿನ್ನೆಲೆಯಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಸಂಗಮದಲ್ಲೇ ಸ್ನಾನ ಮಾಡಬೇಕೆಂಬ ಮನೋಭಾವ ಬೇಡ. ಸ್ಥಳದಲ್ಲಿ ಭಾರೀ ಜನಸಂದಣಿ ಇದ್ದು, ಸುರಕ್ಷತಾ ದೃಷ್ಟಿಯಿಂದ ನಿಮ್ಮ ಶಿಬಿರಗಳಿಂದ ಹೊರ ಬರದಿರಿ ಎಂದು ಜಗದ್ಗುರು ಸ್ವಾಮಿ ರಾಮಭದ್ರಾಚಾರ್ಯ ಸ್ವಾಮೀಜಿಗಳು ಮನವಿ ಮಾಡಿದ್ದಾರೆ.

ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವ “ಮಹಾ ಕುಂಭಮೇಳ” ಉತ್ತರ ಪ್ರದೇಶದ ಪ್ರಯಾಗ್​ರಾಜ್​ ನಗರದಲ್ಲಿ ನಡೆಯುತ್ತಿದ್ದು, ಈ ಕುಂಭಮೇಳವು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮೇಳವಾಗಿದೆ. ಕುಂಭಮೇಳಕ್ಕೆ ಪ್ರಪಂಚದಾದ್ಯಂತದ ಸಾಧು-ಸಂತರು ಮತ್ತು ಭಕ್ತ ಸಾಗರವೇ ಹರಿದುಬರುತ್ತಿದೆ.

10 ಸಾವಿರ ಎಕರೆಗಳಲ್ಲಿ ಕುಂಭಮೇಳಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಮಾಡಿರುವ ಉತ್ತರ ಪ್ರದೇಶ ಸರ್ಕಾರ, ಧಾರ್ಮಿಕ ಆಚರಣೆಗೆ ಆಗಮಿಸುವ ಕೋಟ್ಯಂತರ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಹಲವು ಕ್ರಮಗಳು ಹಾಗೂ ವಿಶೇಷ ಸೌಲಭ್ಯಗಳನ್ನು ಒದಗಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT