ಪ್ರಧಾನಿ ಮೋದಿ. 
ದೇಶ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ

ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ.

ನವದೆಹಲಿ: ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.

ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೂ ಮಾತನಾಡಿದ್ದೇನೆ. ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆಂದು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್ ಮಾಡಿ, ಪ್ರಯಾಗ್ರಾಜ್ ಮಹಾಕುಂಭದಲ್ಲಿ ಕಾಲ್ತುಳಿತದ ಘಟನೆಯಿಂದ ಅತ್ಯಂತ ನೋವಾಗಿದೆ. ತಮ್ಮ ಕುಟುಂಬಸ್ಥರನ್ನು ಕಳೆದುಗೊಂಡ ಭಕ್ತಾರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಜನವರಿ 28 ರ ಮಧ್ಯರಾತ್ರಿ ನಂತರ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದನ್ನು ಉತ್ತರ ಪ್ರದೇಶ ಆಡಳಿತ ಇನ್ನೂ ಬಹಿರಂಗಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ