ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿದ ಮಹಿಳೆ ರಕ್ಷಣೆ ಚಿತ್ರ 
ದೇಶ

ಮಹಾ ಕುಂಭ ಕಾಲ್ತುಳಿತ: ಯೋಗಿ ಸರ್ಕಾರದ ನಿರ್ಲಕ್ಷ್ಯ, ಆಡಳಿತ ವೈಫಲ್ಯ ಆರೋಪ; ಸುಪ್ರೀಂ ಕೋರ್ಟ್ ನಲ್ಲಿ PIL ಸಲ್ಲಿಕೆ

ಮಹಾಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಭಕ್ತರ ಸುರಕ್ಷತೆ ಮತ್ತು ಭದ್ರತೆ ಖಾತ್ರಿಗೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕು.

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿರುವುದಕ್ಕೆ ಉತ್ತರ ಪ್ರದೇಶದ ನಿರ್ಲಕ್ಷ್ಯ ಮತ್ತು ಆಡಳಿತದ ಸಂಪೂರ್ಣ ವೈಫಲ್ಯವೇ ಕಾರಣ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಆಯಾ ರಾಜ್ಯಗಳಿಂದ ಕುಂಭಕ್ಕೆ ಪ್ರಯಾಣಿಸುವ ಜನರ ಸುರಕ್ಷತೆ ಮತ್ತು ಭದ್ರತೆಯ ಖಾತ್ರಿಗೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ (ಪಿಐಎಲ್) ಆರೋಪಿಸಿದ್ದಾರೆ.

ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯ ನ್ಯಾಯಾಧೀಶರ ಬಳಿ ಮನವಿ ಮಾಡಿರುವುದಾಗಿ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಅವರು ತಿಳಿಸಿದ್ದಾರೆ.

ಮಹಾಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಭಕ್ತರ ಸುರಕ್ಷತೆ ಮತ್ತು ಭದ್ರತೆ ಖಾತ್ರಿಗೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕು. ಎಲ್ಲಾ ರಾಜ್ಯಗಳು ಪ್ರಯಾಗ್‌ರಾಜ್‌ನಲ್ಲಿ ಸರಿಯಾದ ಸೌಲಭ್ಯ ಕೇಂದ್ರ ಸ್ಥಾಪಿಸಬೇಕು. ಈ ಕೇಂದ್ರಗಳು ತಮ್ಮ ರಾಜ್ಯಗಳಿಂದ ಬರುವ ಜನರಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳ ಬಗ್ಗೆ ಮೂಲಭೂತ ಮಾಹಿತಿಯನ್ನು ಒದಗಿಸಬೇಕು. ಒಂದು ವೇಳೆ ತುರ್ತು ವೇಳೆಯಲ್ಲಿ ನೆರವು ಕಲ್ಪಿಸಲು ಸಿದ್ಧರಾಗಬೇಕು ಎಂದು ಅವರು PILನಲ್ಲಿ ತಿಳಿಸಿದ್ದಾರೆ.

ವಿವಿಧ ಭಾಷೆಗಳಲ್ಲಿ ನಿರ್ದೇಶನಗಳು, ರಸ್ತೆಗಳು ಇತ್ಯಾದಿಗಳನ್ನು ತೋರಿಸುವ ಪ್ರಕಟಣೆ ಮತ್ತು ಪ್ರದರ್ಶನ ಫಲಕಗಳಿಗೆ ವ್ಯವಸ್ಥೆ ಮಾಡಬೇಕು. ಇದರಿಂದ ವಿವಿಧ ಭಾಷಾ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ಜನರು ತುರ್ತು ಸಂದರ್ಭದಲ್ಲಿ ನೆರವನ್ನು ಸುಲಭವಾಗಿ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ. ಎಲ್ಲಾ ರಾಜ್ಯಗಳು SMS ಮತ್ತು ವಾಟ್ಸಾಪ್ ಸಂದೇಶ ಕಳುಹಿಸಲು ವ್ಯವಸ್ಥೆ ಮಾಡಬೇಕು. ಎಲ್ಲಾ ರಾಜ್ಯ ಸರ್ಕಾರಗಳು ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ, ವೈದ್ಯರು ಮತ್ತು ದಾದಿಯರು ಸೇರಿದಂತೆ ಸಣ್ಣ ವೈದ್ಯಕೀಯ ತಂಡಗಳನ್ನು ಪ್ರಯಾಗ್ರಾಜ್ ಮಹಾ ಕುಂಭದಲ್ಲಿ ನಿಯೋಜಿಸಬೇಕು ಎಂದು ಅವರು ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT