ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ಮಹಿಳೆಯರು ಪ್ರಯಾಣಿಸುತ್ತಿದ್ದ ಕಾರು ಚೇಸ್ ಮಾಡಿದ್ದ ನಾಲ್ವರ ಬಂಧನ

ಏಳು ಆರೋಪಿಗಳಲ್ಲಿ ಆರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಚೆನ್ನೈ: ಚೆನ್ನೈನ ಪೂರ್ವ ಕರಾವಳಿ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರನ್ನು ತಮ್ಮ ಎಸ್‌ಯುವಿಯಲ್ಲಿ ಚೇಸ್ ಮಾಡಿದ್ದ ಏಳು ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಏಳು ಆರೋಪಿಗಳಲ್ಲಿ ಆರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಮತ್ತು ಉಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಉಪ ಆಯುಕ್ತ ಎಸಿ ಕಾರ್ತಿಕೇಯನ್ (ಪಲ್ಲಿಕರಣೈ) ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಲ್ಲದೆ, ಘಟನೆಯಲ್ಲಿ ಭಾಗಿಯಾಗಿರುವ ಎರಡು ವಾಹನಗಳು, ಎರಡೂ ಎಸ್‌ಯುವಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಪೂರ್ವ ಕರಾವಳಿ ರಸ್ತೆಯಲ್ಲಿ ಜನವರಿ 25, 2025 ರಂದು ಬೆಳಗಿನ ಜಾವ 3 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಎಫ್‌ಐಆರ್ ದಾಖಲಾದ ನಂತರ ನಡೆದ ತನಿಖೆಯಲ್ಲಿ ಏಳು ಪುರುಷರ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ತನಿಖೆ ಮುಂದುವರೆದಿದೆ. ಕೆಲ ಸಂಗತಿಗಳನ್ನು ಹೊರತುಪಡಿಸಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

ಆರೋಪಿಗಳ ಎಸ್‌ಯುವಿಯಲ್ಲಿ ಡಿಎಂಕೆ ಧ್ವಜ ಇದ್ದ ಬಗ್ಗೆ ಪ್ರತಿಕ್ರಿಯಿಸಿದ ಅಧಿಕಾರಿ, ಆರೋಪಿಗಳಲ್ಲಿ ಒಬ್ಬರಾದ ಚಾಲಕ "ಟೋಲ್‌ಪ್ಲಾಜಾಗಳನ್ನು ತಪ್ಪಿಸುವ" ಉದ್ದೇಶಕ್ಕಾಗಿ ಅದನ್ನು ಬಳಸಿದ್ದಾನೆ. ಆರೋಪಿಗಳೊಂದಿಗೆ ಯಾವುದೇ ರಾಜಕೀಯ ನಂಟು ಇಲ್ಲ ಎಂದು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಚಂದ್ರು ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳಿವೆ ಮತ್ತು ಅವನು ಈಗಾಗಲೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದನು ಮತ್ತು ಏಳನೇ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್