ದೇಶ

ಬಜೆಟ್ ಅಧಿವೇಶನ: ಸಂಸತ್ತಿನ ಉಭಯ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ರಾಷ್ಟ್ರಪತಿಗಳು ಆರು ಕುದುರೆಗಳನ್ನು ಎಳೆಯುವ ವಿದ್ಯುಕ್ತ ಬಗ್ಗಿಯಲ್ಲಿ ಕುದುರೆ ಸವಾರಿಯ ಅಂಗರಕ್ಷಕರ ಬೆಂಗಾವಲಿನಲ್ಲಿ ಸಂಸತ್ತಿಗೆ ಆಗಮಿಸಿದರು.

ನವದೆಹಲಿ: 2025ನೇ ಸಾಲಿನ ಸಂಸತ್ತಿನ ಬಜೆಟ್ ಅಧಿವೇಶ ಶುಕ್ರವಾರ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಆರಂಭಗೊಂಡಿದೆ.

ಶತಮಾನದ ಐತಿಹಾಸಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೊನ್ನೆ ಮೌನಿ ಅಮಾವಾಸ್ಯೆ ದಿನ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಭಕ್ತರಿಗೆ ಗೌರವ ಸಲ್ಲಿಸುವ ಮೂಲಕ ಮತ್ತು ಕಳೆದ ವರ್ಷ ಡಿಸೆಂಬರ್ 24 ರಂದು ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರಪತಿಗಳು ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಮಹಾಕುಂಭ ಮೇಳ ಒಂದು ಹಬ್ಬ

ಉತ್ತರ ಪ್ರದೇಶದ ಪ್ರಯಾಗ ರಾಜದಲ್ಲಿ ನಡೆಯುತ್ತಿರುವ ಮಹಾ ಕುಂಭವು ಭಾರತದ ಸಾಂಸ್ಕೃತಿಕ ಸಂಪ್ರದಾಯ ಮತ್ತು ಸಾಮಾಜಿಕ ಪ್ರಜ್ಞೆಯ ಹಬ್ಬವಾಗಿದೆ. ದೇಶ ಮತ್ತು ಪ್ರಪಂಚದಾದ್ಯಂತ ಕೋಟ್ಯಂತರ ಭಕ್ತರು ಈಗಾಗಲೇ ಪ್ರಯಾಗ್‌ರಾಜ್‌ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. 'ಮೌನಿ ಅಮಾವಾಸ್ಯೆಯಂದು' ನಡೆದ ದುರ್ಘಟನೆಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಂತರ ಉಭಯ ಸದನಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಎನ್ ಡಿಎ ಸರ್ಕಾರದ ಮೂರನೇ ಅವಧಿಯು ಹಿಂದಿನ ಆಡಳಿತಗಳಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಅಧಿವೇಶನಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ತಿನ ಆವರಣದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಸರ್ಕಾರವು ಸಾಂಸ್ಕೃತಿಕ ಸಂಕೇತವಾಗಿ ಅಳವಡಿಸಿಕೊಂಡ 'ಸೆಂಗೋಲ್' ನ್ನು ಹೊತ್ತ ಅಧಿಕಾರಿ ಸ್ವಾಗತಿಸಿದರು.

ರಾಷ್ಟ್ರಪತಿಗಳು ಆರು ಕುದುರೆಗಳನ್ನು ಎಳೆಯುವ ವಿದ್ಯುಕ್ತ ಬಗ್ಗಿಯಲ್ಲಿ ಕುದುರೆ ಸವಾರಿಯ ಅಂಗರಕ್ಷಕರ ಬೆಂಗಾವಲಿನಲ್ಲಿ ಸಂಸತ್ತಿಗೆ ಆಗಮಿಸಿದರು. ಸಂಸತ್ತಿನ ಕಟ್ಟಡದ ಹುಲ್ಲುಹಾಸಿನ ಮೇಲೆ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ಮೋದಿ, ಓಂ ಬಿರ್ಲಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯ ಕೊಠಡಿಗೆ ಅವರೊಂದಿಗೆ ಆಗಮಿಸಿದರು.

ರಾಷ್ಟ್ರಪತಿಗಳ ಭಾಷಣದ ನಂತರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ 2025ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಲಿದ್ದು, ಅದಕ್ಕೆ ಮುನ್ನ ಇಂದು ಇದನ್ನು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮತ್ತು ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.

ಆರ್ಥಿಕ ಸಮೀಕ್ಷೆ

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದ ಮುನ್ನೋಟದೊಂದಿಗೆ 2024-25 (ಏಪ್ರಿಲ್-ಮಾರ್ಚ್) ಗಾಗಿ ಆರ್ಥಿಕತೆಯ ಸ್ಥಿತಿ ಮತ್ತು ವಿವಿಧ ಸೂಚಕಗಳ ಒಳನೋಟಗಳನ್ನು ಒದಗಿಸುತ್ತದೆ.

ಬ್ಯಾಂಕಿಂಗ್ ನಿಯಮಗಳು ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸುವ ರೈಲ್ವೆ (ತಿದ್ದುಪಡಿ) ಮಸೂದೆ, 2024 ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.

ದೇಶಾದ್ಯಂತ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನಗಳನ್ನು ಸುಧಾರಿಸಲು ಪ್ರಯತ್ನಿಸುವ ವಿಪತ್ತು ನಿರ್ವಹಣಾ (ತಿದ್ದುಪಡಿ) ಮಸೂದೆ, 2024, ಧಾರ್ಮಿಕ ದತ್ತಿಗಳ ನಿರ್ವಹಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ವಕ್ಫ್ (ತಿದ್ದುಪಡಿ) ಮಸೂದೆ, 2024 ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ, 2024 ನ್ನು ಸಹ ಈ ಬಾರಿಯ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.

ಸರ್ಕಾರದ ಶಾಸಕಾಂಗ ಕಾರ್ಯಸೂಚಿಯಲ್ಲಿ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ, 2024, ರೈಲ್ವೆ (ತಿದ್ದುಪಡಿ) ಮಸೂದೆ, 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024, ತೈಲಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ, 2024, ಬಾಯ್ಲರ್ ಮಸೂದೆ, 2024, ವಕ್ಫ್ (ತಿದ್ದುಪಡಿ) ಮಸೂದೆ, 2024, ಕರಾವಳಿ ಶಿಪ್ಪಿಂಗ್ ಮಸೂದೆ, 2024, ವ್ಯಾಪಾರಿ ಸಾಗಣೆ ಮಸೂದೆ, 2024 ಮತ್ತು ಹಣಕಾಸು ಮಸೂದೆ, 2025 ಸೇರಿವೆ.

ಬಜೆಟ್ ಅಧಿವೇಶನದ ಮೊದಲ ಭಾಗವು ಫೆಬ್ರವರಿ 13 ರವರೆಗೆ ಮುಂದುವರಿದು ವಿರಾಮದ ನಂತರ ಎರಡೂ ಸದನಗಳು ಮಾರ್ಚ್ 10 ರಂದು ಮತ್ತೆ ಸಭೆ ಸೇರುತ್ತವೆ. ನಂತರ ಅಧಿವೇಶನವು ಏಪ್ರಿಲ್ 4 ರಂದು ಮುಕ್ತಾಯಗೊಳ್ಳುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT