ಕರ್ನಾಟಕ ಮೂಲದ ನಾಗಾ ಸಾಧು ರಾಜನಾಥ್ ಮಹಾರಾಜ್ 
ದೇಶ

Maha kumbh ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾ ಸಾಧು ಸಾವು!

ಪ್ರತಿ 12 ವರ್ಷಕ್ಕೊಮ್ಮೆ ಕುಂಭಮೇಳದಲ್ಲಿ ನಾಗಸಾಧು, ಸಂತರು, ಭಕ್ತಾಧಿಗಳು ನಿರೀಕ್ಷೆ ಮೀರಿದ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ.

ಚಿತ್ರದುರ್ಗ: ಇತ್ತೀಚೆಗೆ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸಾವನ್ನಪ್ಪಿದ ಕರ್ನಾಟಕ ಮೂಲದವರ ಸಂಖ್ಯೆ ಏರಿಕೆಯಾಗಿದ್ದು, ಚಿತ್ರದುರ್ಗ ಮೂಲದ ನಾಗಾ ಸಾಧು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಜಗತ್ತಿನಲ್ಲೇ ಅತೀ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೇಳವಾಗಿದೆ. ಪ್ರತಿ 12 ವರ್ಷಕ್ಕೊಮ್ಮೆ ಕುಂಭಮೇಳದಲ್ಲಿ ನಾಗಸಾಧು, ಸಂತರು, ಭಕ್ತಾಧಿಗಳು ನಿರೀಕ್ಷೆ ಮೀರಿದ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಇನ್ನು 144 ವರ್ಷಕ್ಕೊಮ್ಮೆ ಅತಿ ಅಪರೂಪದ ಮಹಾಕುಂಭ ಮೇಳವುಕೋಟ್ಯಂತರ ಭಕ್ತರ ಆಕರ್ಷಿಸುತ್ತಿದೆ.

ಇದರ ನಡುವೆಯೇ ದುರದೃಷ್ಟವಶಾತ್ ಕಾಲ್ತುಳಿತ ಸಂಭವಿಸಿದ್ದು, ಇದರಲ್ಲಿ 30 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನು ಕರ್ನಾಟಕದ ಮೂಲದ ಬೆಳಗಾವಿಯ ನಾಲ್ವರು ಮೃತಟ್ಟಿದ್ದಾರೆ. ಅಲ್ಲದೇ ಈ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಸಾಧು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಲ್ತುಳಿತದಿಂದ ರಾಜನಾಥ್ ಮಹಾರಾಜ್(49) ಎನ್ನುವ ನಾಗಸಾಧು ಮೃತಪಟ್ಟಿದ್ದು, ಮೃತ ನಾಗಸಾಧು ರಾಜನಾಥ್ ಅವರು ಬಂಜಾರ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್ ಶ್ರೀ ಒಡನಾಡಿಯಾಗಿದ್ದರು. ಇವರು ಕಳೆದ 7 ವರ್ಷಗಳಿಂದ ಚಿತ್ರದುರ್ಗದ ಬಂಜಾರ ಗುರು ಪೀಠದಲ್ಲಿ ನೆಲೆಸಿದ್ದರು. ಕಳೆದ 15 ದಿನದ ಹಿಂದೆ ಅಷ್ಟೇ ಮಹಾಕುಂಭಮೇಳಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ.

ಇದೀಗ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ತರಬೇಕೆಂದು ಚಿತ್ರದುರ್ಗದ ಲಂಬಾಣಿ ಸೇವಾಲಾಲ್ ಗುರುಪೀಠದ ಪೀಠಾಧಿಪತಿ ಮನವಿ ಮಾಡಿದ್ದಾರೆ. ಈ ಬಗ್ಗೆ ಚಿತ್ರದುರ್ಗದ ಲಂಬಾಣಿ ಸೇವಾಲಾಲ್ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್‌ ಸ್ವಾಮೀಜಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, 'ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವ ರಾಜನಾಥ್ ಮಹಾರಾಜ್ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ತಲುಪಿಸಬೇಕೆಂದು ಉತ್ತರಪ್ರದೇಶ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಲ್ಲದೇ ಆದಷ್ಟು ಬೇಗ ಪಾರ್ಥೀವ ಶರೀರ ತರಿಸುವಂತೆ ಕರ್ನಾಟಕ ಸರ್ಕಾರಕ್ಕೂ ಸಹ ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಕಾಲ್ತುಳಿತ ದಂತಹ ದುರ್ಘಟನೆಗಳು ಮತ್ತೆ ಸಂಭವಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ ನಾಥ್ ಮಹಾರಾಜ್ ಸಿದ್ಧಿ ಸಾಧಕರಾಗಿದ್ದರು. ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿದ ರಾಜ್​ನಾಥ್ ಸಾವೆಂಬುದು ನಂಬಲು ಆಗುತ್ತಿಲ್ಲ. ನಾಗಸಾಧುಗಳ ಪಾರ್ಥೀವ ಶರೀರ ಅನಾಥವಾಗಿ ಬಿದ್ದಿರೋದು ಬೇಸರ ತಂದಿದೆ. ನಮ್ಮನ್ನು ಕುಂಭಮೇಳಕ್ಕೆ ಆಹ್ವಾನಿಸಿದ್ರು. ಕುಂಭಮೇಳಕ್ಕೆ ಹೋಗಬೇಕು, ಸಾಧುಸಂತರ ದರ್ಶನ ಪಡೆಯಬೇಕು, ಪುಣ್ಯ ಸ್ನಾನ ಮಾಡಬೇಕು ಎನ್ನುತಿದ್ದರು. ನಾಗಸಾಧುಗಳ ಮಾತು ನೆನೆದರೆ ದುಃಖ ಆಗುತ್ತಿದೆ. ಸಿದ್ಧಿಸಾಧಕರ ಪಾರ್ಥಿವ ಶರೀರ‌ ಚಿತ್ರದುರ್ಗಕ್ಕೆ‌ ಬರಬೇಕು. ಪಾರ್ಥಿವ ಶರೀರ ಅಂತ್ಯ ಸಂಸ್ಕಾರವನ್ನು ವಿಧಿ‌ವಿಧಾನ ಮಾಡದಿದ್ದರೆ ಅಗೌರವವಾಗುತ್ತದೆ. ಗುರು ಪರಂಪರೆಗೆ ಅಪಮಾನವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT