ಸೋನಿಯಾ ಗಾಂಧಿ-ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು  
ದೇಶ

'ಪಾಪ, ಬಜೆಟ್ ಅಧಿವೇಶನದ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು': ವಿವಾದ ಹುಟ್ಟಿಸಿದ Sonia Gandhi ಮಾತು

ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಷ್ಟ್ರಪತಿಗಳು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು.

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಇಂದು ಸಂಸತ್ತು ಆವರಣದಲ್ಲಿ ಸುದ್ದಿಗಾರರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ್ದ ಭಾಷಣದ ಕುರಿತು ನೀಡಿದ ಹೇಳಿಕೆ ವಿವಾದ ಹುಟ್ಟುಹಾಕಿದೆ.

Poor lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು, ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು, ಬೇಸರದ ವಿಷಯ ಎಂದು ಸೋನಿಯಾ ಗಾಂಧಿ ರಾಷ್ಟ್ರಪತಿಗಳ ಭಾಷಣ ಬಗ್ಗೆ ಅಭಿಪ್ರಾಯ ಕೇಳಿದಾಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಷ್ಟ್ರಪತಿಗಳು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು. ಸರ್ಕಾರ ಕೈಗೊಂಡ ಉಪಕ್ರಮಗಳು ಮತ್ತು ಪ್ರಮುಖ ಕ್ಷೇತ್ರಗಳನ್ನು ಅವರು ಪ್ರಸ್ತಾಪಿಸಿದರು.

ರಾಷ್ಟ್ರಪತಿಗಳ ಭಾಷಣಕ್ಕೆ ವಿಪಕ್ಷಗಳು ಸಹಜವಾಗಿ ಟೀಕಿಸಿವೆ. ಪೂರ್ಣಿಯ ಕ್ಷೇತ್ರದ ಸ್ವತಂತ್ರ ಸಂಸದ ಪಪ್ಪು ಯಾದವ್ ರಾಷ್ಟ್ರಪತಿಗಳನ್ನು ' ರಬ್ಬರ್ ಸ್ಟಾಂಪ್' ಎಂದು ಕರೆದರು. ರಾಷ್ಟ್ರಪತಿಗಳು ಒಂದು ಸ್ಟಾಂಪ್ ಇದ್ದಂತೆ. ಅವರು ಪ್ರೇಮ ಪತ್ರವನ್ನು ಓದಬೇಕು ಅಷ್ಟೇ."

ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರವು ಭಾರತದ ಆಡಳಿತ ಮಾದರಿಯ ಬಲವಾದ ಆಧಾರ ಸ್ತಂಭಗಳಾಗಿವೆ ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಹೇಳಿದರು. ಮಹಿಳಾ ನೇತೃತ್ವದ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಅವರು ಒತ್ತಿ ಹೇಳಿದರು. ದೇಶಾದ್ಯಂತ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಪ್ರಮುಖ ಉಪಕ್ರಮಗಳಿಗೆ ಒತ್ತು ನೀಡಿದರು.

91 ಲಕ್ಷಕ್ಕೂ ಹೆಚ್ಚು ಸ್ವ-ಸಹಾಯ ಗುಂಪುಗಳು (SHGಗಳು) 10 ಕೋಟಿಗೂ ಹೆಚ್ಚು ಮಹಿಳೆಯರಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣವನ್ನು ಒದಗಿಸುತ್ತಿರುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನ ಪ್ರಭಾವವನ್ನು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT