ಮಂಡಿಯಲ್ಲಿ ಭೀಕರ ಪ್ರವಾಹ 
ದೇಶ

Himachal Pradesh: ಮಂಡಿಯಲ್ಲಿ ಭೀಕರ ಪ್ರವಾಹ; ಒಬ್ಬರು ಸಾವು, 18 ಮಂದಿ ನಾಪತ್ತೆ; 41 ಜನರ ರಕ್ಷಣೆ; Video

ಮಂಡಿ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳು, ವಾಹನಗಳು ಮತ್ತು ಸೇತುವೆಗಳು ಕೊಚ್ಚಿಹೋಗಿವೆ ಎಂದು ಮೂಲಗಳು ತಿಳಿಸಿವೆ.

ಚಂಡೀಗಢ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕರ್ಸೋಗ್ ಉಪವಿಭಾಗದಲ್ಲಿ ಹಲವು ಮೇಘಸ್ಫೋಟಗಳಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ ಸಿಲುಕಿ ಒಬ್ಬರು ಸಾವನ್ನಪ್ಪಿದ್ದು, 18 ಜನ ಕಾಣೆಯಾಗಿದ್ದಾರೆ. ಅಲ್ಲದೆ ವಿವಿಧ ಸ್ಥಳಗಳಿಂದ ಕನಿಷ್ಠ 41 ಜನರನ್ನು ರಕ್ಷಿಸಲಾಗಿದೆ.

ಭಾರಿ ಮಳೆಯಿಂದ ಮಂಡಿ ಮತ್ತು ಕುಲ್ಲು ನಡುವಿನ ಅನೇಕ ಸ್ಥಳಗಳಲ್ಲಿ ಕಿರಾತ್‌ಪುರ-ಮನಾಲಿ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಮತ್ತು ವಾಹನ ಸವಾರರು ಇಡೀ ರಾತ್ರಿ ರಸ್ತೆ ಸುರಂಗಗಳಲ್ಲಿ ಸಿಲುಕಿಕೊಂಡಿದ್ದರು.

ಮಂಡಿ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳು, ವಾಹನಗಳು ಮತ್ತು ಸೇತುವೆಗಳು ಕೊಚ್ಚಿಹೋಗಿವೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ 12 ಮಕ್ಕಳು ಮತ್ತು 4 ಮಹಿಳೆಯರು ಸೇರಿದಂತೆ 16 ಜನರನ್ನು ರಕ್ಷಿಸಲಾಗಿದೆ. ರಿಕಿ ಗ್ರಾಮದ ಏಳು ಸದಸ್ಯರ ಕುಟುಂಬವನ್ನು ಸಹ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಭಾರಿ ಮಳೆಯಿಂದ ಮಂಡಿ ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಜಯುನಿ ಖಾಡ್‌ನ ಎರಡು ಮನೆಗಳು ಬಿಯಾಸ್ ನದಿಯಲ್ಲಿ ಕೊಚ್ಚಿಹೋಗಿ 18 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಮುಂದಿನ 24 ರಿಂದ 48 ಗಂಟೆಗಳಲ್ಲಿ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹಠಾತ್ ಪ್ರವಾಹ, ಭೂಕುಸಿತ ಮತ್ತು ಮೂಲಸೌಕರ್ಯ ಕುಸಿತದ ಅಪಾಯ ಹೆಚ್ಚಿದೆ. ಧರ್ಮಶಾಲಾ, ಕುಲ್ಲು ಮತ್ತು ಸೋಲನ್‌ಗಳಲ್ಲಿ ಆರೆಂಜ್ ಅಲರ್ಟ್​ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!