ಸಾಂದರ್ಭಿಕ ಚಿತ್ರ  
ದೇಶ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಈ ಎರಡೂ ಸಂಸ್ಥೆಗಳು ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾವೈರಸ್ ಲಸಿಕೆಗಳು ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿರುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ, ದೆಹಲಿ(AIIMS) ಸ್ಪಷ್ಟನೆ ನೀಡಿದೆ.

ಈ ಎರಡೂ ಸಂಸ್ಥೆಗಳು ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾವೈರಸ್ ಲಸಿಕೆಗಳು ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್ ಸೋಂಕಿನ ಸಮಯದಲ್ಲಿ ಜನರಿಗೆ ಕೋವಿಡ್ ಲಸಿಕೆಯನ್ನು ಆತುರವಾಗಿ ನೀಡಿದ್ದೆ ಜನರು ಇಂದು ಹಠಾತ್ ಪ್ರಾಣ ಕಳೆದುಕೊಳ್ಳುತ್ತಿರುವುದಕ್ಕೆ ಕಾರಣವಾಗಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹೇಳಿದ್ದರು.

ಹೃದಯದಲ್ಲಿ ಅಸಹಜತೆ ಕಂಡರೆ ನಿರ್ಲಕ್ಷಿಸಬೇಡಿ

ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಪ್ರತಿಯೊಬ್ಬರೂ ತಕ್ಷಣ ತಪಾಸಣೆಗೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು, ಇಂತಹ ಅನಾರೋಗ್ಯ ಸ್ಥಿತಿ ಕಂಡುಬಂದರೆ ನಿರ್ಲಕ್ಷಿಸಬಾರದು ಎಂದು ಅವರು ಒತ್ತಾಯಿಸಿದರು.

ಹಠಾತ್ ಸಾವುಗಳು

ಇತ್ತೀಚಿನ ದಿನಗಳಲ್ಲಿ ಯುವ ವಯಸ್ಸಿನಲ್ಲಿಯೇ ಹಠಾತ್ ಸಾವು ಸಂಭವಿಸುತ್ತಿದೆ. ಇದಕ್ಕೆ ಕಾರಣವೇನೆಂದು ಹಲವಾರು ಸಂಸ್ಥೆಗಳ ಮೂಲಕ ತನಿಖೆ ಮಾಡಲಾಗಿದೆ, ಈ ಅಧ್ಯಯನಗಳು ಕೋವಿಡ್-19 ಲಸಿಕೆ ಮತ್ತು ಹಠಾತ್ ಸಾವುಗಳ ವರದಿಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂದು ನಿರ್ಣಾಯಕವಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸುತ್ತವೆ, ಗಂಭೀರ ಅಡ್ಡಪರಿಣಾಮಗಳು ಕಂಡುಬಂದ ಅತ್ಯಂತ ಅಪರೂಪದ ಪ್ರಕರಣಗಳಿವೆ ಎಂದು ಅದು ಹೇಳಿದೆ.

ತಳಿಶಾಸ್ತ್ರ, ಜೀವನಶೈಲಿ, ಪರಿಸ್ಥಿತಿಗಳು ಮತ್ತು ಕೋವಿಡ್ ನಂತರದ ತೊಡಕುಗಳು ಸೇರಿದಂತೆ ಹಲವು ಕಾರಣಗಳಿಂದ ಹಠಾತ್ ಹೃದಯಾಘಾತದ ಸಾವುಗಳು ಉಂಟಾಗಬಹುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಎಂಆರ್ ಮತ್ತು ಎನ್‌ಸಿಡಿಸಿ, ವಿಶೇಷವಾಗಿ 18 ರಿಂದ 45 ವರ್ಷ ವಯಸ್ಸಿನ ಯುವಜನರಲ್ಲಿ ಹಠಾತ್ ಸಾವುಗಳ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಇದನ್ನು ಅನ್ವೇಷಿಸಲು, ವಿಭಿನ್ನ ಸಂಶೋಧನಾ ವಿಧಾನಗಳನ್ನು ಬಳಸಿಕೊಂಡು ಎರಡು ಪೂರಕ ಅಧ್ಯಯನಗಳನ್ನು ಕೈಗೊಳ್ಳಲಾಯಿತು - ಒಂದು ಹಿಂದಿನ ಅಂಕಿಅಂಶ ಆಧರಿಸಿ ಮತ್ತು ಇನ್ನೊಂದು ನೈಜ-ಸಮಯದ ಪರೀಕ್ಷೆಯನ್ನು ಒಳಗೊಂಡಿದೆ.

ಐಸಿಎಂಆರ್‌ನ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆ (NIE) ನಡೆಸಿದ ಮೊದಲ ಅಧ್ಯಯನವು ಭಾರತದಲ್ಲಿ 18 ರಿಂದ 45 ವರ್ಷ ವಯಸ್ಸಿನವರಲ್ಲಿ ಹಠಾತ್ ಸಾವುಗಳಿಗೆ ಸಂಬಂಧಿಸಿದ ಅಂಶಗಳು - ಬಹು-ಕೇಂದ್ರಿತ ಹೊಂದಾಣಿಕೆಯ ಪ್ರಕರಣ ನಿಯಂತ್ರಣ ಅಧ್ಯಯನ ಎಂಬ ಶೀರ್ಷಿಕೆಯನ್ನು ಹೊಂದಿತ್ತು.

ಈ ಅಧ್ಯಯನವನ್ನು 2023ರ ಮೇ ತಿಂಗಳಿನಿಂದ ಆಗಸ್ಟ್ ವರೆಗೆ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 47 ತೃತೀಯ ಆರೈಕೆ ಆಸ್ಪತ್ರೆಗಳಲ್ಲಿ ನಡೆಸಲಾಯಿತು ಎಂದು ಹೇಳಿಕೆ ತಿಳಿಸಿದೆ. ಅಕ್ಟೋಬರ್ 2021 ಮತ್ತು ಮಾರ್ಚ್ 2023 ರ ನಡುವೆ ಆರೋಗ್ಯವಂತರಾಗಿ ಕಂಡುಬಂದ ವ್ಯಕ್ತಿಗಳಲ್ಲಿ ಅಧ್ಯಯನ ನಡೆಸಲಾಗಿದೆ.

ಕೋವಿಡ್-19 ಲಸಿಕೆಯು ಯುವ ವಯಸ್ಕರಲ್ಲಿ ಹಠಾತ್ ಸಾವಿನ ಅಪಾಯವನ್ನು ಹೆಚ್ಚಿಸುವುದಿಲ್ಲ ಎಂದು ಸಂಶೋಧನೆಗಳು ನಿರ್ಣಾಯಕವಾಗಿ ತೋರಿಸಿವೆ. ಯುವಕರಲ್ಲಿ ಹಠಾತ್ ಸಾವಿಗೆ ಕಾರಣವಾಗುವ ಅಂಶಗಳು ಎಂಬ ಶೀರ್ಷಿಕೆಯ ಎರಡನೇ ಅಧ್ಯಯನವನ್ನು ಪ್ರಸ್ತುತ ದೆಹಲಿಯ ಏಮ್ಸ್, ಐಸಿಎಂಆರ್ ನ ಸಹಯೋಗದೊಂದಿಗೆ ನಡೆಸುತ್ತಿದೆ.

ಕೋವಿಡ್ ಲಸಿಕೆ ಅಪಾಯವನ್ನು ಹೆಚ್ಚಿಸುವುದಿಲ್ಲ ಎಂದು ಕಂಡುಬಂದಿದೆ, ಆದರೆ ಆಧಾರವಾಗಿರುವ ಆರೋಗ್ಯ ಸಮಸ್ಯೆಗಳು, ಆನುವಂಶಿಕ ಪ್ರವೃತ್ತಿ ಮತ್ತು ಅಪಾಯಕಾರಿ ಜೀವನಶೈಲಿಯ ಆಯ್ಕೆಗಳು ಹಠಾತ್ ಸಾವಿಗೆ ಪ್ರಮುಖ ಕಾರಣವಾಗುತ್ತದೆ ಎಂದು ಅಧ್ಯಯನ ತಿಳಿಸಿದೆ.

ಕೋವಿಡ್ ಲಸಿಕೆ ಹಠಾತ್ ಸಾವುಗಳಿಗೆ ಕಾರಣ ಎಂಬುದು ಸುಳ್ಳು ಹೇಳಿಕೆಗಳಾಗಿದ್ದು, ಜನರನ್ನು ದಾರಿತಪ್ಪಿಸುತ್ತವೆ. ಇದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ. ನಿರ್ಣಾಯಕ ಪುರಾವೆಗಳಿಲ್ಲದ ಊಹಾಪೋಹದ ಹೇಳಿಕೆಗಳು ಸಾಂಕ್ರಾಮಿಕ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಲಸಿಕೆಗಳ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ದುರ್ಬಲಗೊಳಿಸುತ್ತವೆ ಎಂದಿದೆ.

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 20 ಕ್ಕೂ ಹೆಚ್ಚು ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಹೃದಯ ಛಿದ್ರವಾಗಿದೆ: ಆಫ್ರಿಕಾ ವಿರುದ್ಧದ ಸರಣಿ ಹೀನಾಯ ಸೋಲಿನ ನಂತರ ಇಡೀ ದೇಶದ ಕ್ಷಮೆಯಾಚಿಸಿದ ರಿಷಭ್ ಪಂತ್!

WPL Auction 2026: ಬರೋಬ್ಬರಿ 3.2 ಕೋಟಿ ರೂ. ಗೆ ಆಲ್ ರೌಂಡರ್ ದೀಪ್ತಿ ಶರ್ಮಾ ಸೋಲ್ಡೌಟ್‌! ಸ್ಟನ್ ಆದ ಗಂಗೂಲಿ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

SCROLL FOR NEXT