ಉಗ್ರರ ಸಾಂದರ್ಭಿಕ ಚಿತ್ರ 
ದೇಶ

Mali: ಅಲ್-ಖೈದಾ-ಸಂಬಂಧಿತ ಉಗ್ರರಿಂದ ಮೂವರು ಭಾರತೀಯರ ಅಪಹರಣ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ಮಾಲಿಯಾದ್ಯಂತ ಅನೇಕ ದಾಳಿಗಳನ್ನು ನಡೆಸಿರುವ ಅಲ್-ಖೈದಾ-ಸಂಬಂಧಿತ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮಿನ್ (JNIM)ಈ ಅಪಹರಣ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ನವದೆಹಲಿ: ಮಾಲಿಯಲ್ಲಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಭಾರತೀಯರನ್ನು ನಿಷೇಧಿತ ಉಗ್ರಗಾಮಿ ಸಂಘಟನೆ ಅಲ್-ಖೈದಾ ಜೊತೆ ನಂಟು ಹೊಂದಿರುವ ಉಗ್ರರು ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಖಚಿತಪಡಿಸಿದ್ದಾರೆ. ಪಶ್ಚಿಮ ಮಾಲಿಯ ಕೇಯೆಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಫ್ಯಾಕ್ಟರಿ ಮೇಲೆ ಭಾರಿ ಶಸ್ತ್ರಸಜ್ಜಿತ ದಾಳಿಕೋರರು ಸಂಘಟಿತ ದಾಳಿ ನಡೆಸಿದಾಗ ಈ ಘಟನೆ ನಡೆದಿದೆ.

ದಾಳಿ ವೇಳೆ ಬಂದೂಕುಧಾರಿಗಳು ಕಾರ್ಖಾನೆಗೆ ನುಗ್ಗಿ ಕಾರ್ಮಿಕರನ್ನು ಒತ್ತೆಯಾಳಾಗಿ ತೆಗೆದುಕೊಂಡಿದ್ದಾರೆ ಎಂದು ಸ್ಥಳೀಯ ವರದಿಗಳು ಹೇಳಿವೆ. ಮಾಲಿಯಾದ್ಯಂತ ಅನೇಕ ದಾಳಿಗಳನ್ನು ನಡೆಸಿರುವ ಅಲ್-ಖೈದಾ-ಸಂಬಂಧಿತ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮಿನ್ (JNIM)ಈ ಅಪಹರಣ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಇದನ್ನು ಶೋಚನೀಯ ಹಿಂಸಾಚಾರದಕೃತ್ಯ ಎಂದು ಖಂಡಿಸಿದ್ದು, ಕಾರ್ಮಿಕರ ಸುರಕ್ಷಿತ ಮತ್ತು ತ್ವರಿತ ಬಿಡುಗಡೆಯನ್ನು ಖಾತ್ರಿಪಡಿಸಲು ಮಾಲಿ ಸರ್ಕಾರವನ್ನು ಒತ್ತಾಯಿಸಿದೆ.

ಜುಲೈ 1 ರಂದು ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರ ಗುಂಪು ಕಾರ್ಖಾನೆಯ ಆವರಣದಲ್ಲಿ ಸಂಘಟಿತ ದಾಳಿ ನಡೆಸಿ ಮೂವರು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ. ಭಾರತ ಸರ್ಕಾರವು ಈ ಕೃತ್ಯವನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ. ನಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮಾಲಿ ಸರ್ಕಾರವನ್ನು ಒತ್ತಾಯಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಬಮಾಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಒತ್ತೆಯಾಳುಗಳನ್ನು ರಕ್ಷಿಸಲು ಮಾಲಿಯನ್ ಅಧಿಕಾರಿಗಳು, ಸ್ಥಳೀಯ ಕಾನೂನು ಜಾರಿ ಮತ್ತು ಡೈಮಂಡ್ ಸಿಮೆಂಟ್ ಫ್ಯಾಕ್ಟರಿಯ ಆಡಳಿತದೊಂದಿಗೆ "ನಿಕಟ ಮತ್ತು ನಿರಂತರ ಸಂಪರ್ಕ"ದಲ್ಲಿದೆ. ಅಪಹರಣಕ್ಕೊಳಗಾದ ಕಾರ್ಮಿಕರ ಕುಟುಂಬಗಳಿಗೆ ಈ ಕಾರ್ಯಾಚರಣೆಯು ಮಾಹಿತಿ ನೀಡುತ್ತಿದೆ. ಸಚಿವಾಲಯದ ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಭಾರತೀಯ ಪ್ರಜೆಗಳ ಸುರಕ್ಷಿತ ಮತ್ತು ಶೀಘ್ರ ಬಿಡುಗಡೆಗೆ ಅನುಕೂಲವಾಗುವಂತೆ ವಿವಿಧ ಹಂತಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದೆ.

ಈ ಮಧ್ಯೆ ಮಾಲಿಯಲ್ಲಿ ವಾಸಿಸುವ ಎಲ್ಲಾ ಭಾರತೀಯರು ಜಾಗರೂಕರಾಗಿ ಇರಲು ಮತ್ತು ಸಹಾಯಕ್ಕಾಗಿ ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ಒತ್ತಾಯಿಸಿದೆ. ಅಪಹರಣಕ್ಕೊಳಗಾದ ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸ್ಸಾತಿ ಖಾತ್ರಿಗೆ ಬದ್ಧವಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ MEA ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್