ಜೀವಿತಾವಧಿ ಮುಗಿದ ವಾಹನಗಳಿಗೆ ಇಂಧನ ನಿಷೇಧದ ನಂತರ ಸಂಚಾರ ಪೊಲೀಸ್ ಸಿಬ್ಬಂದಿ ಪೆಟ್ರೋಲ್ ಪಂಪ್‌ನಲ್ಲಿ ಕಾವಲು ಕಾಯುತ್ತಿದ್ದಾರೆ. FILE PHOTO
ದೇಶ

ತಂತ್ರಜ್ಞಾನ, ಜಾರಿ ಅಡೆತಡೆಗಳಿಂದ ಹಳೆ ವಾಹನಗಳಿಗೆ ಪೆಟ್ರೋಲ್/ಡೀಸೆಲ್ ನಿಷೇಧ ಅಸಾಧ್ಯ: ದೆಹಲಿ ಸರ್ಕಾರ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.

ನವದೆಹಲಿ: ತಾಂತ್ರಿಕ ಸವಾಲುಗಳು ಮತ್ತು ಸಂಕೀರ್ಣ ವ್ಯವಸ್ಥೆಗಳಿಂದಾಗಿ ಹಳೆಯ ವಾಹನಗಳಿಗೆ ಇಂಧನ(ಪೆಟ್ರೋಲ್, ಡೀಸೆಲ್) ನಿಷೇಧ ಕಾರ್ಯಸಾಧ್ಯವಲ್ಲ ಎಂದು ದೆಹಲಿ ಸರ್ಕಾರ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ(CAQM) ಪತ್ರ ಬರೆದಿದೆ.

ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.

ರಾಷ್ಟ್ರ ರಾಜಧಾನಿ ಪ್ರದೇಶದಾದ್ಯಂತ(NCR) ನಿಷೇಧವನ್ನು ಜಾರಿಗೆ ತರಬೇಕೆಂದು ಸರ್ಕಾರ ಸೂಚಿಸಿದೆ. ಆದರೆ ಹಳೆಯ ವಾಹನಗಳಿಗೆ "ಕಠಿಣ ಮಾನದಂಡಗಳನ್ನು" ನಿಗದಿಪಡಿಸಿದ್ದಕ್ಕಾಗಿ ಹಿಂದಿನ AAP ಆಡಳಿತವನ್ನು ಅವರು ಟೀಕಿಸಿದರು.

ಜುಲೈ 1 ರಿಂದ ದೆಹಲಿ ಸರ್ಕಾರವು, ನೋಂದಣಿ ರದ್ದುಪಡಿಸಲಾದ ಮತ್ತು ನ್ಯಾಯಾಲಯದ ಆದೇಶದ ಪ್ರಕಾರ ರಸ್ತೆಗಳಲ್ಲಿ ಓಡಾಡಲು ಅನುಮತಿಸದ - ಡೀಸೆಲ್ ವಾಹನಗಳಿಗೆ 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷ ಅಥವಾ ಅದಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸಲಾಗಿದೆ.

ನಿಷೇಧ ಜಾರಿಗೆ ಬಂದ ನಂತರ ಇಂಧನ ತುಂಬಿಸಲು ಪೆಟ್ರೋಲ್ ಪಂಪ್‌ಗಳಿಗೆ ತೆರಳುವ ಹಳೆಯ ವಾಹನಗಳನ್ನು ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT