ಅಪಘಾತಕ್ಕೊಳಗಾದ ಬಸ್ ಗಳು 
ದೇಶ

ಜಮ್ಮು-ಕಾಶ್ಮೀರ: ಅಮರನಾಥ ಯಾತ್ರೆ ವೇಳೆ 5 ಬಸ್ ಗಳ ನಡುವೆ ಸರಣಿ ಅಪಘಾತ; 36 ಯಾತ್ರಿಕರಿಗೆ ಗಾಯ

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಅವಘಡ ಸಂಭವಿಸಿದೆ

ರಾಂಬನ್: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಸ್‌ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಾವಲು ಪಡೆಯಲ್ಲಿರುವ ಬಸ್‌ ಒಂದರ ಬ್ರೇಕ್ ವೈಫಲ್ಯದಿಂದ ಡಿಕ್ಕಿ ಸಂಭವಿಸಿದೆ. ಬೆಂಗಾವಲಿನಲ್ಲಿದ್ದ ಕೊನೇ ಬಸ್, ನಿಯಂತ್ರಣ ಕಳೆದುಕೊಂಡು ಮುಂದಿನ ಬಸ್ ಗೆ ಗುದ್ದಿದೆ. ಇದರಿಂದಾಗಿ ನಾಲ್ಕು ಬಸ್ ಗಳಲ್ಲಿದ್ದ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ರಾಂಬನ್ ಉಪ ಆಯುಕ್ತ ಮೊಹಮ್ಮದ್ ಅಲಿಯಾಸ್ ಖಾನ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಗಾಯಾಳುಗಳನ್ನು ರಾಂಬನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಗಾಯಾಳುಗಳಿಗೆ ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಡಿಸ್ಚಾರ್ಜ್ ಮಾಡಲಾಯಿತು ಎಂದು ರಾಂಬನ್ ವೈದ್ಯಕೀಯ ಮಹಾ ಅಧೀಕ್ಷಕ ಸುದರ್ಶನ್ ಸಿಂಗ್ ಕಟೋಚ್ ತಿಳಿಸಿದ್ದಾರೆ.

ಹಾನಿಗೊಳಗಾದ ಬಸ್‌ಗಳನ್ನು ಬದಲಾಯಿಸಿ ಅಮರನಾಥ ಯಾತ್ರಿಕರ ಸುಗಮ ಯಾತ್ರೆಗೆ ಅನುಕೂಲ ಮಾಡಿಕೊಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!