ಸಂಜಯ್ ಭಂಡಾರಿ 
ದೇಶ

ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ತಲೆಮರೆಸಿಕೊಂಡಿರುವ 'ಘೋಷಿತ ಅಪರಾಧಿ'

ವಿಶೇಷ ನ್ಯಾಯಾಲಯವು ಪ್ಯುಗಿಟಿವ್ ಎಕನಾಮಿಕ್ ಅಫೆಂಡರ್ಸ್ ಆಕ್ಟ್, 2018 ರ ಅಡಿಯಲ್ಲಿ ಸಂಜಯ್ ಭಂಡಾರಿ 'ಘೋಷಿತ ಅಪರಾಧಿ' ಎಂದು ಆದೇಶ ಹೊರಡಿಸಿದೆ.

ನವದೆಹಲಿ: ಜಾರಿ ನಿರ್ದೇಶನಾಲಯ(ED)ದ ಮನವಿಯ ಮೇರೆಗೆ ದೆಹಲಿ ನ್ಯಾಯಾಲಯವು ಶನಿವಾರ ಯುಕೆ ಮೂಲದ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯನ್ನು ತಲೆಮರೆಸಿಕೊಂಡಿರುವ ಘೋಷಿತ ಅಪರಾಧಿ ಎಂದು ಘೋಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷ ನ್ಯಾಯಾಲಯವು ಪ್ಯುಗಿಟಿವ್ ಎಕನಾಮಿಕ್ ಅಫೆಂಡರ್ಸ್ ಆಕ್ಟ್, 2018 ರ ಅಡಿಯಲ್ಲಿ ಸಂಜಯ್ ಭಂಡಾರಿ 'ಘೋಷಿತ ಅಪರಾಧಿ' ಎಂದು ಆದೇಶ ಹೊರಡಿಸಿದೆ.

ED ಪ್ರಕಾರ, ಭಂಡಾರಿ 2016 ರಿಂದ UKಯಲ್ಲಿ ತಲೆಮರೆಸಿಕೊಂಡಿದ್ದು, ಅವರನ್ನು ಹಸ್ತಾಂತರಿಸುವಂತೆ ಕೋರಿ ಭಾರತ ಸಲ್ಲಿಸಿದ ಅರ್ಜಿಯನ್ನು ಇತ್ತೀಚೆಗೆ UK ನ್ಯಾಯಾಲಯ ತಿರಸ್ಕರಿಸಿದೆ.

2015 ರ ಕಪ್ಪು ಹಣ ವಿರೋಧಿ ಕಾನೂನಿನ ಅಡಿಯಲ್ಲಿ ಅವರ ವಿರುದ್ಧ ಸಲ್ಲಿಸಲಾದ ಆದಾಯ ತೆರಿಗೆ ಇಲಾಖೆಯ ಚಾರ್ಜ್‌ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು, ED ಫೆಬ್ರವರಿ 2017 ರಲ್ಲಿ ಭಂಡಾರಿ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.

ಇಡಿ 2020 ರಲ್ಲಿ ಸಂಜಯ್ ಭಂಡಾರಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT