ವಿರುದುನಗರ: ತಮಿಳುನಾಡಿನಲ್ಲಿ ಮತ್ತೆ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಸ್ಫೋಟದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ಇದೇ ತಿಂಗಳ ಆರಂಭದಲ್ಲಿ ತಮಿಳುನಾಡಿನ ಸತ್ತೂರು ಬಳಿಯ ಚಿನ್ನಕಾಮನ್‌ಪಟ್ಟಿಯಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದು, ಐದು ಜನರು ಗಾಯಗೊಂಡಿದ್ದರು.
ತಮಿಳುನಾಡಿನ ಶಿವಕಾಶಿ ಹಾಗೂ ವಿರುದನಗರ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆಗಾಗ್ಗೆ ಸ್ಫೋಟದಂತಹ ಘಟನೆಗಳು ಸಂಭವಿಸುತ್ತಲೇ ಇರುತ್ತದೆ.