ಕಂಗನಾ ರಣಾವತ್ 
ದೇಶ

ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರಣಾವತ್

ನಮ್ಮ ದೇಶವನ್ನು ವಿಭಜಿಸುವವರಿಂದ ನಾವು ದೂರವಿರಬೇಕು. ನಮ್ಮ ದೇಶದ ಜನರು ವಿಭಿನ್ನ ರೀತಿಯಲ್ಲಿ ಪರಸ್ಪರ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ಇಂತಹ ಕ್ರಮಗಳು ಅವರ ಪ್ರಯತ್ನಗಳಿಗೆ ಅಡ್ಡಿಪಡಿಸುತ್ತವೆ.

ಧರ್ಮಶಾಲಾ: ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು, ನಾವು ದೇಶದ ಏಕತೆಯನ್ನು ಕಾಪಾಡಬೇಕು ಎಂದು ನಟಿ, ಸಂಸದೆ ಕಂಗನಾ ರಣಾವತ್‌ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾಷಾ ಚರ್ಚೆಯ ಮಧ್ಯೆ ಬಿಜೆಪಿ ಸಂಸದೆ ಈ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್) ಕಾರ್ಯಕರ್ತರು ಮರಾಠಿ ಮಾತನಾಡದ ಕಾರಣ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆಯೂ ಮಾತನಾಡಿದ್ದಾರೆ.

ನಮ್ಮ ದೇಶವನ್ನು ವಿಭಜಿಸುವವರಿಂದ ನಾವು ದೂರವಿರಬೇಕು. ನಮ್ಮ ದೇಶದ ಜನರು ವಿಭಿನ್ನ ರೀತಿಯಲ್ಲಿ ಪರಸ್ಪರ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ಇಂತಹ ಕ್ರಮಗಳು ಅವರ ಪ್ರಯತ್ನಗಳಿಗೆ ಅಡ್ಡಿಪಡಿಸುತ್ತವೆ. ಪ್ರವಾಸೋದ್ಯಮಕ್ಕಾಗಿ ಇಲ್ಲಿಗೆ ಅನೇಕ ಜನರು ಬರುತ್ತಾರೆ. ಅವರು ಪಹಾರಿಗಳು ಹೇಗೆ ಮಾತನಾಡುತ್ತಾರೆಂದು ತಿಳಿಯಲು ಬಯಸುತ್ತಾರೆ. ನಾವು ಪ್ರಯಾಣಿಸುವಾಗ, ದಕ್ಷಿಣದ ಜನರು ಹೇಗೆ ಮಾತನಾಡುತ್ತಾರೆಂದು ತಿಳಿಯಲು ನಾವು ಬಯಸುತ್ತೇವೆ. ದೇಶದಲ್ಲಿ ಏಕತೆಯ ಮನೋಭಾವವನ್ನು ನಾವು ಕಾಪಾಡಿಕೊಳ್ಳಬೇಕು. ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಹಿಂದಿ-ಮರಾಠಿ ಭಾಷಾ ಸಂಘರ್ಷ ಜೋರಾಗಿದೆ. ಮಹಾರಾಷ್ಟ್ರ ಸರ್ಕಾರವು ತ್ರಿಭಾಷಾ ನೀತಿ ಜಾರಿಗೆ ಮುಂದಾಗಿತ್ತು. ಶಾಲೆಗಳಲ್ಲಿ ಹಿಂದಿಯನ್ನೂ ಕಡ್ಡಾಯಗೊಳಿಸಲು ಕ್ರಮಕೈಗೊಂಡಿತ್ತು. ಆದರೆ, ಮರಾಠಿಗರು, ವಿಪಕ್ಷಗಳು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT