ಸಂಗ್ರಹ ಚಿತ್ರ 
ದೇಶ

ಒಂದು ದಿನವೂ ಕೆಲಸಕ್ಕೆ ಬಾರದೆ 12 ವರ್ಷಗಳಿಂದ 35 ಲಕ್ಷ ರೂ ವೇತನ ಪಡೆದ ಪೊಲೀಸ್ ಕಾನ್ಸ್ಟೇಬಲ್..!

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಭೋಪಾಲ್: ಒಂದಲ್ಲ, ಎರಡಲ್ಲ ಬರೋಬ್ಬರಿ 12 ವರ್ಷಗಳ ಕಾಲ ಒಂದೇ ಒಂದು ದಿನವೂ ಕೆಲಸಕ್ಕೆ ಹೋಗದೆ ಪೊಲೀಸ್ ಪೇದೆಯೊಬ್ಬ 35 ಲಕ್ಷ ರೂಪಾಯಿ ವೇತನ ಪಡೆದ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಈ ಪ್ರಕಣ ಇಲಾಖೆಯ ನಿರ್ಲಕ್ಷ್ಯ ಮತ್ತು ವ್ಯವಸ್ಥೆಯಲ್ಲಿನ ಲೋಪಗಳನ್ನು ಬಹಿರಂಗಪಡಿಸಿದೆ.

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 2011ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ನೇಮಕವಾಗಿದ್ದ ಅಭಿಷೇಕ್ ಎಂಬ ವ್ಯಕ್ತಿಯನ್ನು ಸಗರ ಪೊಲೀಸ್ ತರಬೇತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆತ ತರಬೇತಿ ಕೇಂದ್ರಕ್ಕೆ ಹೋಗದೆ ಮನೆಗೆ ಮರಳಿದ್ದ. ಆದರೂ ವೇತನ ಮಾತ್ರ ಪ್ರತಿ ತಿಂಗಳು ಆತನ ಬ್ಯಾಂಕ್ ಖಾತೆಗೆ ಜಮಾ ಆಗಿದೆ.

ಸಗರ ಪೊಲೀಸ್ ತರಬೇತಿ ಕೇಂದ್ರಕ್ಕೆ ಆತ ತರಬೇತಿಗೆ ಹೋಗಿಲ್ಲ ಮತ್ತು ನಿರಂತರವಾಗಿ ಆತನ ಖಾತೆಗೆ ಸಂಬಳ ಜಮಾ ಆಗುತ್ತಿರುವುದು ಯಾರ ಗಮನಕ್ಕೂ ಬಂದಿಲ್ಲ.

ಕರ್ತವ್ಯಕ್ಕೆ ಗೈರು ಹಾಜರಾದರೂ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿಲ್ಲ, ರಜೆಗೆ ಅರ್ಜಿಯನ್ನೂ ಸಲ್ಲಿಸಿಲ್ಲ. ಒಂದು ದಿನವೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡದಿದ್ದರೂ ಇಲಾಖೆಯಲ್ಲಿ ಆತನ ಹೆಸರು ದಾಖಲಾಗಿದೆ. ಮಾತ್ರವಲ್ಲ, 35 ಲಕ್ಷ ರೂ. ವೇತನ ಆತನ ಖಾತೆಗೆ ಜಮಾ ಆಗಿದೆ.

ಕಾನ್ಸ್ಟೇಬಲ್ ತನ್ನ ಸೇವಾ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಭೋಪಾಲ್ ಪೊಲೀಸ್ ಲೈನ್ಸ್ ಗೆ ಕಳುಹಿಸಿದ್ದಾನೆ. ಆದರೆ, ಇದ್ಯಾವುದನ್ನೂ ಪರಿಶೀಲಿಸದೆ ದಾಖಲೆಗಳನ್ನು ಸ್ವೀಕರಿಸಿ ಅನುಮೋದಿಸಲಾಗಿದೆ. ತರಬೇತಿ ಕೇಂದ್ರದಲ್ಲಿ ಯಾರೂ ಅವನ ಗೈರುಹಾಜರಿಯನ್ನು ಗಮನಿಸಿಲ್ಲ. ಇಲಾಖೆಯಲ್ಲಿ ಬೆಳಕಿಗೆ ಬಂದಿರುವ ಈ ಪ್ರಕರಣ ಹಲವರ ಹುಬ್ಬೇರುವಂತೆ ಮಾಡಿದೆ.

ಪ್ರಕರಣ ಬಯಲಿಗೆ ಬಂದಿದ್ದು ಹೇಗೆ?

2011ರ ಬ್ಯಾಚ್ ನಲ್ಲಿ ತರಬೇತಿ ಪಡೆದು ಸೇವೆ ಸಲ್ಲಿಸುತ್ತಿರುವವರಿಗೆ ಬಡ್ತಿ ನೀಡಲು ಕಡತ ಪರಿಶೀಲಿಸಿದಾಗ ಈ ಮಾಹಿತಿ ಬಹಿರಂಗವಾಗಿದೆ.

ಪೊಲೀಸ್ ಕಾನ್ಸ್ಟೇಬಲ್ ನೋಡಿದ ನೆನಪು ಯಾರಿಗೂ ಇರಲಿಲ್ಲ. ಆಂತರಿಕ ತನಿಖೆಯಲ್ಲಿ ಅಧಿಕಾರಿಗಳು ಕಾನ್ಸ್ಟೇಬಲ್'ನ ಹಿಂದಿನ ದಾಖಲೆಗಳು ಮತ್ತು ಸೇವಾ ಮಾಹಿತಿಯನ್ನು ಪತ್ತೆಹಚ್ಚಲು ಪ್ರಯತ್ನಿಸಿದರೂ ಅದು ವಿಫಲವಾಗಿದೆ. 12 ವರ್ಷಗಳ ಕಾಲ ಒಬ್ಬ ವ್ಯಕ್ತಿ ಕೆಲಸದಲ್ಲಿದ್ದು ಯಾವುದೇ ಮಾಹಿತಿ ಇಲ್ಲದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನೆಗೆ ವಿಚಾರಣೆಗಾಗಿ ಕಾನ್ಸ್ಟೇಬಲ್ ಅನ್ನು ಕರೆಸಿದ್ದಾರೆ.

ವಿಚಾರಣೆ ವೇಳೆ ಕಾನ್ಸ್ಟೇಬಲ್ ತನಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.

ಮಾನಸಿಕ ಆರೋಗ್ಯ ಸಂಸ್ಯೆಗಳಿಂದಾಗಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂದಿರುವ ಆತ ಇದನ್ನು ಸಾಬೀತುಪಡಿಸಲು ದಾಖಲೆಗಳನ್ನೂ ಸಲ್ಲಿಸಿದ್ದಾನೆಂದು ಪ್ರಕರಣ ತನಿಖೆ ನಡೆಸುತ್ತಿರುವ ಎಸಿಪಿ ಅಂಕಿತಾ ಖಟೇರ್ಕರ್ ಅವರು ಹೇಳಿದ್ದಾರೆ.

ಪೊಲೀಸ್ ನಿಯಮಗಳ ಬಗ್ಗೆ ತನಗೆ ತಿಳಿದಿರಲಿಲ್ಲ, ಸಂವಹನದ ಕೊರತೆ ಮತ್ತು ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಗಳನ್ನು ಪಾಲಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ 1.5 ಲಕ್ಷ ರೂಪಾಯಿಗಳನ್ನು ಇಲಾಖೆಗೆ ಹಿಂದಿರುಗಿಸಿದ್ದಾನೆ. ಉಳಿದ ಮೊತ್ತವನ್ನು ಭವಿಷ್ಯದ ಸಂಬಳದಿಂದ ಕಡಿತಗೊಳಿಸಿ ಪಾವತಿಸಲು ಒಪ್ಪಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT