ಡಿಸಿಎಂ ಡಿ ಕೆ ಶಿವಕುಮಾರ್(ಸಂಗ್ರಹ ಚಿತ್ರ) 
ದೇಶ

ಸಚಿವ ಸಂಪುಟ ಪುನರ್ ರಚನೆ ಇಲ್ಲ, ದೆಹಲಿಗೆ ಬಂದಿರುವುದು ಅಭಿವೃದ್ಧಿ ಕುರಿತು ಚರ್ಚಿಸಲು: DCM ಡಿ.ಕೆ ಶಿವಕುಮಾರ್

ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ ಎಂದರು.

ನವದೆಹಲಿ: ಕೇಂದ್ರದ ವಿವಿಧ ಸಚಿವರ ಜತೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದ ನಂತರ ಮತ್ತೊಮ್ಮೆ ದೆಹಲಿಗೆ ಬಂದು ವಿವಿಧ ಇಲಾಖೆಗಳ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನಿನ್ನೆ ಕೇಂದ್ರದ ವಿವಿಧ ಇಲಾಖೆಗಳ ಸಚಿವರನ್ನು ಭೇಟಿ ಮಾಡಿದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ. ಅಭಿವೃದ್ಧಿ ಯೋಜನೆಗಳ ಸಲುವಾಗಿ ಚರ್ಚಿಸಲು ನಾವು ಬಂದಿದ್ದೇವೆ. ರಾಹುಲ್ ಗಾಂಧಿ (Rahul Gandhi) ಅವರ ಭೇಟಿಗೂ ಸಮಯ ಕೋರಿದ್ದೇನೆ. ಇಂದು ಅವರು ಪಟ್ನಾಗೆ ಹೋಗಿದ್ದಾರೆ. ನಾಳೆ ಭೇಟಿ ಮಾಡುವ ಸಾಧ್ಯತೆ ಇದೆ‌ ಎಂದರು.

ರಾಜಕೀಯ ಚರ್ಚೆ ಇಲ್ಲ

ಸಂಪುಟ ಪುನರ್ ರಚನೆ ಸದ್ಯಕ್ಕೆ ಇಲ್ಲ, ಆ ಬಗ್ಗೆ ಚರ್ಚಿಸಲು ನಾವು ದೆಹಲಿಗೆ ಬಂದಿಲ್ಲ. ನಾವು ಇಲ್ಲಿ ಬಂದಿರುವುದು ಕರ್ನಾಟಕಕ್ಕೆ ಸಂಬಂಧಿಸಿದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಲು. ಮೈಸೂರು ದಸರಾದಲ್ಲಿ ಸಣ್ಣ ಏರ್ ಶೋ ಆಯೋಜನೆ ಬಗ್ಗೆ ಮನವಿ ಮಾಡಲು ಇಂದು ನಾನು ಮತ್ತು ಸಿಎಂ ಸಿದ್ದರಾಮಯ್ಯನವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುತ್ತೇವೆ ಎಂದರು.

ಕೇಂದ್ರ ಸಚಿವರ ಜತೆ ನೀರಾವರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕೇಂದ್ರ ಜಲಶಕ್ತಿ, ಪರಿಸರ ಹಾಗೂ ಅರಣ್ಯ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಅರಣ್ಯ ಪ್ರದೇಶದ ಜಾಗ ಸ್ವಾಧೀನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಮಹದಾಯಿ ಯೋಜನೆ ವಿಚಾರವಾಗಿ ಗೋವಾ ಸರ್ಕಾರ ತಕರಾರು ಹಾಕಿದೆ. ಗೋವಾ ತಕರಾರಿನ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮೇಕೆದಾಟು ಯೋಜನೆ, ಕೃಷ್ಣ ನದಿ ನೀರು ವಿಚಾರವಾಗಿಯೂ ಚರ್ಚೆ ನಡೆದಿದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಲಾಗಿದೆ. ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಎತ್ತಿನಹೊಳೆ ಯೋಜನೆಗೆ ಅನುದಾನಕ್ಕೆ ಮನವಿ

ಎತ್ತಿನಹೊಳೆ ಯೋಜನೆಗೆ ಅನುದಾನ ನೀಡುವಂತೆ ಕೇಂದ್ರ ಸಚಿವರ ಬಳಿ ಕೇಳಿದ್ದೇವೆ. ಇತರ ನೀರಾವರಿ ಯೋಜನೆಗಳಿಗೆ ನೀಡಬೇಕಿದ್ದ ಅನುದಾನಕ್ಕೆ ಮನವಿ ಮಾಡಿದ್ದೇವೆ. ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ನಿನ್ನೆ ಭೇಟಿ ಮಾಡಿದ್ದೆ. ಅದೇ ರೀತಿ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಿದ್ದೆ. ವಿ ಸೋಮಣ್ಣ ಕೂಡ ಜೊತೆಯಲ್ಲಿ ಇದ್ದರು. ನಂತರ ಪ್ಲಹ್ಲಾದ್ ಜೋಶಿಯವರನ್ನು ಭೇಟಿಯಾಗಿದ್ದೇನೆ. ಅರಣ್ಯ ಹಾಗೂ ಪರಿಸರ ಸಚಿವರ ಬಳಿ, ಎತ್ತಿನಹೊಳೆ ಯೋಜನೆಯ ಮಾಹಿತಿ ನೀಡಿದ್ದೇನೆ. ತುಮಕೂರು ಹಾಗೂ ಹಾಸನ ಭಾಗದಲ್ಲಿ ಕೆಲಸ ನಿಂತಿತ್ತು. ಕಂದಾಯ ಭೂಮಿ ನಮ್ಮದು ಎಂದು ಹೇಳಿದ್ದರು. ಅದಕ್ಕೆ ಪರ್ಯಾಯ ವಾಗಿ ಭೂಮಿ ನೀಡಲಾಗಿದೆ. ಹೀಗಾಗಿ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದ್ದೆವು. ಈಗ ಮತ್ತೆ ಮನವಿ ಮಾಡಲಾಗಿದೆ ಎಂದರು.

ಕಳಸ, ಮಹದಾಯಿ ಚರ್ಚೆ

ಕಳಸಾ, ಮಹದಾಯಿ ಯೋಜನೆ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ನಾವು ಟೆಂಡರ್ ಕರೆದಿದ್ದೇವೆ. ಆಂಧ್ರ ಮತ್ತು ಗೋವಾದವರು ಶೋಕಾಸ್ ನೊಟೀಸ್ ನೀಡಿದ್ದಾರೆ ಎಂದು ತಿಳಿಯಿತು. ಅವರು ಯಾರು ನಮ್ಮ ರಾಜ್ಯಕ್ಕೆ ನೋಟಿಸ್ ನೀಡಲುನೀವು ಕೇಂದ್ರದವರು ಬೇಕಿದ್ದರೆ ಹೇಳಿ, ಹೇಗೆ ಎಲ್ಲಿ ಮಾಡಬೇಕು ಎಂಬುದಾಗಿ. ಅದರಂತೆಯೇ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT