ಯುದ್ಧ ವಿಮಾನದ ಅವಶೇಷ 
ದೇಶ

ರಾಜಸ್ಥಾನ: ಚುರು ಬಳಿ ಜಾಗ್ವಾರ್ ಯುದ್ಧ ವಿಮಾನ ಪತನ, ಇಬ್ಬರು ಪೈಲಟ್ ಸಾವು; Video

ಬಯಲು ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿ ಬಿದ್ದಿದ್ದು, ಅವಶೇಷಗಳಡಿಯಲ್ಲಿ ಇಬ್ಬರು ಪೈಲಟ್ ಗಳ ಮೃತದೇಹ ಪತ್ತೆಯಾಗಿದೆ.

ಚುರು: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐದು ತಿಂಗಳಲ್ಲಿ ಐಎಎಫ್ ಯುದ್ಧ ವಿಮಾನ ಅಪಘಾತಕ್ಕೀಡಾಗುತ್ತಿರುವ ಮೂರನೇ ಪ್ರಕರಣ ಇದಾಗಿದೆ.

ಬಯಲು ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಮೃತಪಟ್ಟಿದ್ದಾರೆ.

IAF ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದ ಸ್ಥಳದಿಂದ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಅವು ಪೈಲಟ್‌ಗಳದ್ದಾಗಿರಬಹುದು ಎಂದು ನಂಬಲಾಗಿದೆ.

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಭಾರತೀಯ ವಾಯುಪಡೆಯ(IAF) ಜಾಗ್ವಾರ್ ಯುದ್ಧ ವಿಮಾನ ಪತನವಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಯುದ್ಧ ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ವಿಮಾನ ಅಪಘಾತದ ಸ್ಥಳದ ಬಳಿ ಮಾನವ ಅವಶೇಷಗಳು ಪತ್ತೆಯಾಗಿವೆ. ಪೈಲಟ್‌ನ ದೇಹವು ತೀವ್ರ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ಮೃತ ಎರಡನೇ ವ್ಯಕ್ತಿಯ ಗುರುತನ್ನು ವಾಯುಪಡೆ ಮತ್ತು ಸ್ಥಳೀಯ ಆಡಳಿತ ಇನ್ನೂ ದೃಢಪಡಿಸಿಲ್ಲ ಎಂದು ರಾಜಲ್ದೇಸರ್‌ನ ಸ್ಥಳೀಯ ಪೊಲೀಸ್ ಅಧಿಕಾರಿ ಕಮ್ಲೇಶ್ ಅವರು ಪಿಟಿಐಗೆ ತಿಳಿಸಿದ್ದಾರೆ.

ವಿಡಿಯೋದಲ್ಲಿ ಅಪಘಾತದ ಸ್ಥಳದಿಂದ ಹೊಗೆ ಬರುತ್ತಿರುವುದನ್ನು ಮತ್ತು ಸ್ಥಳೀಯ ಅಧಿಕಾರಿಗಳು ಪ್ರದೇಶಕ್ಕೆ ಧಾವಿಸುತ್ತಿರುವುದನ್ನು ಕಾಣಬಹುದು. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆ: ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ 'ಕೈ' ಕಮಾಂಡ್

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಆಡಳಿತ ವಿರೋಧಿ ಅಲೆ ಸಹಾಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಉಪ ಮುಖ್ಯಮಂತ್ರಿಯಾಗಲು ನಾನು ಸಿದ್ಧ: ಹೈಕಮಾಂಡ್ ಬಯಸಿದರೆ ಸಚಿವ ಸ್ಥಾನ ತ್ಯಾಗ; ಜಮೀರ್‌ ಅಹ್ಮದ್‌ ಖಾನ್‌

ನ.18ರಿಂದ Bengaluru Tech Summit 2025: ‘ಡೀಪ್‌ಟೆಕ್ ದಶಕ’ಕ್ಕೆ 600 ಕೋಟಿ ರೂ. ಹೂಡಿಕೆ; ಸಚಿವ ಪ್ರಿಯಾಂಕ್ ಖರ್ಗೆ

ನಗರದ ಘನತೆ, ಸಂಸ್ಕೃತಿಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ರಚನೆ: ನನಗೂ ಅರಸುಗೂ ಹೋಲಿಕೆ ಬೇಡ; ಸಿಎಂ ಗರಂ!

SCROLL FOR NEXT