ಸಾಂದರ್ಭಿಕ ಚಿತ್ರ 
ದೇಶ

65 ವರ್ಷದ ಅಜ್ಜಿಯ ಮೇಲೆ 25 ವರ್ಷದ ಮೊಮ್ಮಗನಿಂದಲೇ ಅತ್ಯಾಚಾರ; ಆರೋಪಿ ಬಂಧನ

ಪ್ರಕರಣವು ಸೂಕ್ಷ್ಮವಾಗಿದ್ದು, ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಪ್ರಣವ್ ಚೌಹಾಣ್ ಹೇಳಿದ್ದಾರೆ.

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರುದಲ್ಲಿ 65 ವರ್ಷದ ಅಜ್ಜಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪತಿಯ ಮರಣದ ನಂತರ ಒಂಟಿಯಾಗಿ ವಾಸಿಸುತ್ತಿರುವ ಸಂತ್ರಸ್ತೆ, ಜುಲೈ 3ರ ಮಧ್ಯಾಹ್ನ ತನ್ನ ಮೊಮ್ಮಗ ತನ್ನ ಮನೆಗೆ ಬಂದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಬಿಎನ್‌ಎಸ್‌ನ ಸೆಕ್ಷನ್ 64(2) (ಅತ್ಯಾಚಾರ), 332(ಬಿ) ಮತ್ತು 351(3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವು ಸೂಕ್ಷ್ಮವಾಗಿದ್ದು, ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಪ್ರಣವ್ ಚೌಹಾಣ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!

Toxic ಬೆನ್ನಲ್ಲೇ ಭಾರೀ ಹೈಪ್ ಕ್ರಿಯೆಟ್ ಮಾಡಿದ್ದ Paradiseಗೆ ತೆಲುಗರಿಂದಲೇ ತರಾಟೆ; ಆದರೂ ಮೊದಲ ದಿನ ದಾಖಲೆ ಕಲೆಕ್ಷನ್!