ಉಪ ರಾಷ್ಟ್ರಪತಿ ಜಗದೀಪ್ ಧನಕರ್  
ದೇಶ

ದೈವೇಚ್ಛೆಯಂತೆ ನಿವೃತ್ತಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಇಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉಪ ರಾಷ್ಟ್ರಪತಿಗಳು ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಗುರುವಾರ ತಾವು ಆಗಸ್ಟ್ 2027 ರಲ್ಲಿ ನಿವೃತ್ತರಾಗುವುದಾಗಿ ತಿಳಿಸಿದ್ದು, ಅದು "ದೈವೇಚ್ಛೆಗೆ ಒಳಪಟ್ಟಿರುತ್ತದೆ" ಎಂದು ನಗುತ್ತಾ ಹೇಳಿದ್ದಾರೆ.

ಇಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉಪ ರಾಷ್ಟ್ರಪತಿಗಳು ಈ ಹೇಳಿಕೆ ನೀಡಿದ್ದಾರೆ.

"ನಾನು ಸೂಕ್ತ ಸಮಯದಲ್ಲಿ, ಆಗಸ್ಟ್ 2027 ರಲ್ಲಿ ದೈವೇಚ್ಛೆಗೆ ಅನುಗುಣವಾಗಿ ನಿವೃತ್ತಿ ಹೊಂದುತ್ತೇನೆ" ಎಂದು ಜಗದೀಪ್ ಧನಕರ್ ಹೇಳಿದ್ದಾರೆ.

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರ ಐದು ವರ್ಷಗಳ ಅಧಿಕಾವಧಿ ಆಗಸ್ಟ್ 10, 2027 ರಂದು ಕೊನೆಗೊಳ್ಳಲಿದೆ.

ವೃತ್ತಿಯಲ್ಲಿ ಹಿರಿಯ ವಕೀಲರಾಗಿರುವ ಧನಕರ್ ಅವರು 2022 ರಲ್ಲಿ ಉಪ ರಾಷ್ಟ್ರಪತಿಗಳಾಗಿ ಆಯ್ಕೆಯಾಗುವ ಮೊದಲು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ಅವರನ್ನು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಉಪ ರಾಷ್ಟ್ರಪತಿಗಳಾಗಿ ನಾಮನಿರ್ದೇಶನ ಮಾಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ