ಕ್ಯಾಂಟೀನ್ ಸಿಬ್ಬಂದಿಗಳ ಥಳಿಸುತ್ತಿರುವ ಶಾಸಕ ಸಂಜಯ್ ಗಾಯಕ್ವಾಡ್.  
ದೇಶ

ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್‌ ನಡೆಸುತ್ತಾರೆ, ಅವರಿಗೆ ಆಹಾರ ಪೂರೈಕೆ ಗುತ್ತಿಗೆ ನೀಡಬಾರದು: ಶಿವಸೇನೆ ಶಾಸಕ

ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಮತ್ತು ಮಹಾರಾಷ್ಟ್ರದ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ.

ಮುಂಬೈ: ಹಳಸಿದ ಆಹಾರ ನೀಡಿದ್ದಾರೆ ಎಂದು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬುಲ್ದಾನಾ ವಿಧಾನಸಭಾ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಅವರು ಈಗ ದಕ್ಷಿಣ ಭಾರತೀಯರನ್ನು ಗುರಿಯಾಗಿಸಿಕೊಂಡು ಹೊಸ ವಿವಾದ ಹುಟ್ಟುಹಾಕಿದ್ದಾರೆ.

ದಕ್ಷಿಣ ಭಾರತೀಯರು "ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ". ಆದ್ದರಿಂದ ಅವರಿಗೆ ಮಹಾರಾಷ್ಟ್ರದಲ್ಲಿ ಆಹಾರ ಪೂರೈಕೆ ಗುತ್ತಿದೆ ನೀಡಬಾರದು ಎಂದು ಸಂಜಯ್ ಗಾಯಕ್ವಾಡ್ ಅವರು ಗುರುವಾರ ಹೇಳಿದ್ದಾರೆ.

"ಶೆಟ್ಟಿ ಎಂಬ ಗುತ್ತಿಗೆದಾರರಿಗೆ ಏಕೆ ಕಾಂಟ್ರ್ಯಾಕ್ಟ್ ನೀಡಲಾಯಿತು? ಅದನ್ನು ಮರಾಠಿ ವ್ಯಕ್ತಿಗೆ ನೀಡಿ. ನಾವು ಏನು ತಿನ್ನುತ್ತೇವೆ ಎಂದು ಅವರಿಗೆ ಗೊತ್ತಿದೆ ಮತ್ತು ನಮಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡುತ್ತಾರೆ. ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಮತ್ತು ಮಹಾರಾಷ್ಟ್ರದ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ. ಅವರು ನಮ್ಮ ಮಕ್ಕಳನ್ನು ಭ್ರಷ್ಟಗೊಳಿಸಿದ್ದಾರೆ. ಇಂತಹವರು ಉತ್ತಮ ಆಹಾರ ಹೇಗೆ ನೀಡುತ್ತಾರೆ?" ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಶಾಸಕ ಪ್ರಶ್ನಿಸಿದ್ದಾರೆ.

ಮಂಗಳವಾರ ಸಂಜೆ, "ಹಳಸಿದ" ದಾಲ್ ಮತ್ತು ಅನ್ನವನ್ನು ನೀಡಿದ್ದರಿಂದ ಕೋಪಗೊಂಡ ಸಂಜಯ್ ಗಾಯಕ್ವಾಡ್, ಕೊಲಾಬಾದ ಶಾಸಕರ ಹಾಸ್ಟೆಲ್‌ನ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವ ವಿಡಿಯೋ ಬುಧವಾರ ವೈರಲ್ ಆಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

SCROLL FOR NEXT