ಏರ್ ಇಂಡಿಯಾ ವಿಮಾನ ಪತನ 
ದೇಶ

Air India Flight ಪತನಕ್ಕೆ ಟ್ವಿಸ್ಟ್: ನಾನು ಎಂಜಿನ್ ಆಫ್ ಮಾಡಿಲ್ಲ; ಪೈಲಟ್‌ಗಳ ನಡುವಿನ ಸಂಭಾಷಣೆ ಬಹಿರಂಗ; ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ

AAIB ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿವೆ,

ಗುಜರಾತ್: ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ.

ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ ಆಯ್ತು ಎಂಬುದನ್ನು15 ಪುಟಗಳ ವರದಿ ಬಹಿರಂಗಪಡಿಸಿದೆ.

AAIBಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡಿವೆ, ಆ ನಂತರ ವಿಮಾನ ಪತನವಾಗಿದೆ.

ವಿಮಾನದ ಎಂಜಿನ್‌ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ. ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.

ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್‌ಗಳ ಇಂಧನ ಸ್ವಿಚ್‌ಗಳು ಇದ್ದಕ್ಕಿದ್ದಂತೆ RUN ನಿಂದ CUTOFF ಗೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್‌ಗಳಿಗೆ ಇಂಧನ ಬರುವುದನ್ನು ನಿಂತುಹೋಗಿದೆ.

ನೀವು ಸಂಪೂರ್ಣ ವರದಿಯನ್ನು ಇಲ್ಲಿ ಓದಬಹುದು.

ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಪ್ರಕಾರ, ಒಬ್ಬ ಪೈಲಟ್ ಮತ್ತೊಬ್ಬ ಪೈಲಟ್ ಬಳಿ, ‘ನೀವು ಎಂಜಿನ್ ಅನ್ನು ಏಕೆ ಆಫ್ ಮಾಡಿದ್ದೀರಿ’ ಎಂದು ಕೇಳಿದ್ದಾರೆ. ಆಗ ಮತ್ತೊಬ್ಬ ಪೈಟಲ್, ‘ನಾನು ಏನನ್ನೂ ಮಾಡಲಿಲ್ಲ’ ಎಂದು ಹೇಳಿದ್ದಾರೆ. ಇಬ್ಬರು ಪೈಲಟ್‌ಗಳ ನಡುವಿನ ಈ ಸಂಭಾಷಣೆ ಗಮನಿಸಿದರೆ, ಯಾರೂ ಉದ್ದೇಶಪೂರ್ವಕವಾಗಿ ಇಂಧನ ಸ್ವಿಚ್ ಕಡಿತಗೊಳಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ತುರ್ತು ಪರಿಸ್ಥಿತಿ ಅರಿವಿಗೆ ಬರುತ್ತಿದ್ದಂತೆಯೇ ವಿಮಾನದ ಸ್ವಯಂಚಾಲಿತ ವ್ಯವಸ್ಥೆಯನ್ನು ಸಕ್ರಿಯಗೊಳಿಸಲು ಪ್ರಯತ್ನಿಸಲಾಯಿತು. ಆದಾಗ್ಯೂ, ರಾಮ್ ಏರ್ ಟರ್ಬೈನ್ (RAT) ಅಂದರೆ, ತುರ್ತು ಫ್ಯಾನ್ ಮತ್ತು ಎಪಿಯುನಂತಹ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿದ ನಂತರವೂ, ವಿಮಾನವನ್ನು ಅಪಘಾತದಿಂದ ರಕ್ಷಿಸಲು ಪೈಟಲ್​ಗಳಿಗೆ ಸಾಧ್ಯವಾಗಲಿಲ್ಲ. ವಿಮಾನದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಇದ್ದಾಗ ಮಾತ್ರ ರಾಮ್ ಏರ್ ಟರ್ಬೈನ್ ಸಕ್ರಿಯವಾಗುತ್ತದೆ. ಇದರರ್ಥ, ಎಂಜಿನ್ ಸ್ಥಗಿತಗೊಂಡಿದ್ದು ವಿಮಾನದ ವಿದ್ಯುತ್ ಪೂರೈಕೆ ಮೇಲೂ ಪರಿಣಾಮ ಬೀರಿತ್ತು.

ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟ ಸ್ವಲ್ಪ ಸಮಯದ ನಂತರ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆವರಣಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ 275 ಜನರು ಸಾವನ್ನಪ್ಪಿದ್ದರು.

ವಿಮಾನವು ಏರ್‌ಪೋರ್ಟ್‌ನ ಹೊರಗಿನ ಕಟ್ಟಡಗಳಿಗೆ ಡಿಕ್ಕಿ ಹೊಡೆಯುವ ಕೆಲವೇ ಸೆಕೆಂಡುಗಳ ಮೊದಲು, 08:09:05 ಯುಟಿಸಿ ಗೆ ತುರ್ತು ಕರೆ ಮಾಡಲಾಯಿತು. ಈ ವೇಳೆ ಮೇ ಡೇ ಎಂಬ ಸಂದೇಶವನ್ನು ಪೈಲಟ್‌ ಕೊಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...

ಮಹಿಳಾ ಏಕದಿನ ವಿಶ್ವಕಪ್ 2025: ಚೊಚ್ಚಲ ಪ್ರಶಸ್ತಿ ಗೆದ್ದ ಬೆನ್ನಲ್ಲೇ 'ನಾಯಕತ್ವ' ತ್ಯಜಿಸಲು ಹರ್ಮನ್‌ಪ್ರೀತ್ ಕೌರ್ ಗೆ ಹೆಚ್ಚಿದ ಒತ್ತಡ! ಕಾರಣವೇನು?

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ- ಸಿಎಂ ಸಿದ್ದರಾಮಯ್ಯ

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರ ಮುಂದೂಡಿಕೆ: 'ಸುಪ್ರೀಂ'ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಹೊಸ ತಂತ್ರ!

ಭಾರತದಲ್ಲಿ ಕುಟುಂಬ ರಾಜಕೀಯ ಜನ್ಮಸಿದ್ಧ ಹಕ್ಕು ಎನ್ನುವಂತಾಗಿದೆ: ಶಶಿ ತರೂರ್

SCROLL FOR NEXT