ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ 
ದೇಶ

ಭಾರತೀಯ ಕಾನೂನು ವ್ಯವಸ್ಥೆಯನ್ನು ಸರಿಪಡಿಸುವ ಅವಶ್ಯಕತೆಯಿದೆ: ಸಿಜೆಐ ಬಿ.ಆರ್ ಗವಾಯಿ; Video

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಪಿಎಸ್ ನರಸಿಂಹ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು.

ಹೈದರಾಬಾದ್: ಭಾರತೀಯ ಕಾನೂನು ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದ್ದು, ಅದನ್ನು ಸರಿಪಡಿಸುವ ಅಗತ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಶನಿವಾರ ಹೇಳಿದರು.

ಹೈದರಾಬಾದ್‌ನ ಜಸ್ಟೀಸ್ ಸಿಟಿಯಲ್ಲಿರುವ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುವ ಮೂಲಕ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕು. ಕುಟುಂಬದ ಮೇಲೆ ಹಣಕಾಸಿನ ಹೊರೆಯನ್ನು ಹೇರಬಾರದು ಎಂದು ಸಲಹೆ ನೀಡಿದರು.

ಕಾನೂನು ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆಗಳಿವೆ ಮತ್ತು ಪ್ರಮುಖ ಸುಧಾರಣೆಗಳ ಅಗತ್ಯವಿದೆ ಎಂದು ನಾನು ನಂಬಿದ್ದರೂ, ಈ ದೇಶದ ಜನರು ಮುಂದೆ ಬಂದು ಅಗತ್ಯ ಬದಲಾವಣೆಗಳನ್ನು ತರಲು ಸಹಾಯ ಮಾಡುತ್ತಾರೆ ಎಂಬ ವಿಶ್ವಾಸ ಇನ್ನೂ ನನ್ನಲ್ಲಿದೆ ಎಂದು ಸಿಜೆಐ ಗವಾಯಿ ಹೇಳಿದರು.

'ನಮ್ಮ ದೇಶ ಮತ್ತು ಕಾನೂನು ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದೆ. ಪ್ರಕರಣಗಳ ವಿಚಾರಣೆಗಳಲ್ಲಿ ವಿಳಂಬ ಉಂಟಾಗಿ ಕೆಲವೊಮ್ಮೆ ದಶಕಗಳವರೆಗೆ ಹೋಗಬಹುದು. ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ವರ್ಷಗಳ ಕಾಲ ಕಳೆದ ನಂತರ ವ್ಯಕ್ತಿಯು ನಿರಪರಾಧಿ ಎಂದು ಕಂಡುಬಂದ ಪ್ರಕರಣಗಳನ್ನು ನಾವು ನೋಡಿದ್ದೇವೆ. ನಮ್ಮ ಅತ್ಯುತ್ತಮ ಪ್ರತಿಭೆಗಳು ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ' ಎಂದು ಅವರು ಹೇಳಿದರು.

ಮಾರ್ಗದರ್ಶಕರನ್ನು ಹುಡುಕುವಾಗ, ಅವರು ಶ್ರೀಮಂತರು, ಪ್ರಸಿದ್ಧರು ಅಥವಾ ಶಕ್ತಿಶಾಲಿಗಳು ಎಂಬ ಕಾರಣಕ್ಕಾಗಿ ಯಾರನ್ನಾದರೂ ಆಯ್ಕೆ ಮಾಡಬಾರದು. ಬದಲಾಗಿ, ಅವರು ಪ್ರಾಮಾಣಿಕ, ದಯೆ ಮತ್ತು ಉತ್ತಮ ಮೌಲ್ಯಗಳನ್ನು ಹೊಂದಿರುವವರನ್ನು ಆಯ್ಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಪಿಎಸ್ ನರಸಿಂಹ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ತೆಲಂಗಾಣ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

'HAL ನಿರ್ಮಿತ ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ ಗಳು ಹಸ್ತಾಂತರಕ್ಕೆ ಸಿದ್ಧ': ರಕ್ಷಣಾ ಕಾರ್ಯದರ್ಶಿ

SCROLL FOR NEXT