ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ

ರಾಷ್ಟ್ರಪತಿಗಳು, ಲಡಾಖ್‌ಗೆ ಹೊಸ ಲೆಫ್ಟಿನೆಂಟ್ ಗವರ್ನರ್ ಹಾಗೂ ಹರಿಯಾಣ ಮತ್ತು ಗೋವಾ ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬ್ರಿಗೇಡಿಯರ್(ಡಾ) ಬಿ.ಡಿ. ಮಿಶ್ರಾ(ನಿವೃತ್ತ) ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಅಂಗೀಕರಿಸಿದ್ದಾರೆ.

ಇದೇ ವೇಳೆ ರಾಷ್ಟ್ರಪತಿಗಳು, ಲಡಾಖ್‌ಗೆ ಹೊಸ ಲೆಫ್ಟಿನೆಂಟ್ ಗವರ್ನರ್ ಹಾಗೂ ಹರಿಯಾಣ ಮತ್ತು ಗೋವಾ ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಹರಿಯಾಣದ ನೂತನ ರಾಜ್ಯಪಾಲರಾಗಿ ಪ್ರೊ. ಆಶಿಮ್ ಕುಮಾರ್ ಘೋಷ್ ಅವರನ್ನು ಹಾಗೂ ಗೋವಾ ರಾಜ್ಯಪಾಲರಾಗಿ ಪುಸಪತಿ ಅಶೋಕ್ ಗಜಪತಿ ರಾಜು ನೇಮಕ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.

ಲಡಾಖ್‌ ಲೆಫ್ಟಿನೆಂಟ್ ಗವರ್ನರ್ ಆಗಿ ಕವಿಂದರ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದ್ದು, ಈ ಮೂವರು ಅಧಿಕಾರ ವಹಿಸಿಕೊಳ್ಳುವ ದಿನಾಂಕಗಳಿಂದ ಅವರ ಅಧಿಕಾರ ಅವಧಿ ಜಾರಿಗೆ ಬರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!