ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಕಾಂಗ್ರೆಸ್ ನಾಯಕ ಅನಿಲ್ ಮರೆಲ್ಲಿಗೆ ಗುಂಡಿಕ್ಕಿ ಹತ್ಯೆ

ಮರೆಲ್ಲಿ ಅವರನ್ನು ಹೈದರಾಬಾದ್‌ನಿಂದ ಹಿಂಬಾಲಿಸಿದ ದುಷ್ಕರ್ಮಿಗಳು, ನಂತರ ಅವರ ವಾಹನವನ್ನು ತಡೆದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಆಡಳಿತರೂಢ ಕಾಂಗ್ರೆಸ್ ನಾಯಕ ಅನಿಲ್ ಮರೆಲ್ಲಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವಾರಿಕುಂಟಂ ಎಕ್ಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಕಾಂಗ್ರೆಸ್ ನಾಯಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಅನಿಲ್ ಮರೆಲ್ಲಿ ಅವರು ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು ಮತ್ತು ಆರೋಪಿಗಳೊಂದಿಗೆ ಅವರು ಕೆಲವು ಭೂ ವ್ಯಾಜ್ಯದಲ್ಲಿ ಭಾಗಿಯಾಗಿರಬಹುದು ಎಂದು ಕೋಲ್ಚಾರಂನ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್ ಘೌಸ್ ಅವರು ತಿಳಿಸಿದ್ದಾರೆ.

ಮರೆಲ್ಲಿ ಅವರನ್ನು ಹೈದರಾಬಾದ್‌ನಿಂದ ಹಿಂಬಾಲಿಸಿದ ದುಷ್ಕರ್ಮಿಗಳು, ನಂತರ ಅವರ ವಾಹನವನ್ನು ತಡೆದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ ಎಂದು ಸಬ್-ಇನ್ಸ್‌ಪೆಕ್ಟರ್ ಘೌಸ್ ಹೇಳಿದ್ದಾರೆ.

ಶವವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ