ಫೌಜಾ ಸಿಂಗ್ 
ದೇಶ

ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ನಿಧನ: ಪ್ರಧಾನಿ ಮೋದಿ ಸಂತಾಪ

ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಚಂಡೀಗಢ: ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಸಂಜೆ ಜಲಂಧರ್​​ನಲ್ಲಿರುವ ತಮ್ಮ ಮನೆಯ ಹೊರಗೆ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.

2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು.

89 ವರ್ಷವಾಗಿದ್ದಾಗ ಅವರ ಪತ್ನಿ ಮತ್ತು ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬಳಿಕ ಅವರು ಕುಗ್ಗಿ ಹೋಗಿದ್ದರು. ಬಳಿಕ ಅವರು ಖಿನ್ನತೆ ವಿರುದ್ಧ ಹೋರಾಡಲು ಆರಂಭಿಸಿದ್ದರು. ಮ್ಯಾರಥಾನ್​ಗೆ ಸೇರಲು ನಿರ್ಧರಿಸಿದ್ದರು. ಅವರ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದರು. 1911ರಲ್ಲಿ ರೈತ ಕುಟುಂಬದಲ್ಲಿ ಜನಿಸಿದ್ದ ಸಿಂಗ್‌ ಕಿರಿಯ ಸಹೋದರನಾಗಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳ ಗೆದ್ದ ಸಾಧನೆ ಸಿಂಗ್‌ ಅವರದ್ದು. ಸಿಂಗ್‌ ಅವರ ಓಟದ ವೈಖರಿ, ಸಹಿಷ್ಣುತೆಯಿಂದಾಗಿ ಅವರನ್ನು ‘ಟರ್ಬನ್ಡ್ ಟೊರ್ನಾಡೊ’ ಎಂದೇ ಕರೆಯಲಾಗುತ್ತಿತ್ತು. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಸಿಂಗ್‌ ಜ್ಯೋತಿ ಹಿಡಿದಿದ್ದರು.

ಇಲ್ಲಿಯವರೆಗೆ, ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದ ಕಾರು ಪತ್ತೆಯಾಗಿಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಫೌಜಾ ಸಿಂಗ್‌ ಅವರ ನಿಧನಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್‌; ನ್ಯೂಯಾರ್ಕ್ ಟೈಮ್ಸ್ ವರದಿ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ರಾಜ್ಯದ ಜನತೆಗ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿ

SCROLL FOR NEXT