ವಿದ್ಯಾರ್ಥಿನಿಯ ಪೋಷಕರು ಮತ್ತು ಕುಟುಂಬ ಸದಸ್ಯರನ್ನು ಭೇಟಿಯಾದ ಒಡಿಶಾ ಮುಖ್ಯಮಂತ್ರಿ. 
ದೇಶ

ಒಡಿಶಾ: ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಕಾಲೇಜಿನ ಸಹಾಯಕ ಪ್ರಾಧ್ಯಾಪಕನಾಗಿರುವ ಸಮೀರ ಕುಮಾರ್ ಸಾಹು ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.

ಭುವನೇಶ್ವರ: ಕಾಲೇಜು ಪ್ರಾಧ್ಯಾಪಕರು ನೀಡುತ್ತಿದ್ದ ಲೈಂಗಿಕ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾಳೆ.

ಬಾಲಸೋರ್‌ನ ಸರಕಾರಿ ಕಾಲೇಜಿನ ಬಿ.ಎಡ್ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಸಹಾಯಕ ಪ್ರಾಧ್ಯಾಪಕನಾಗಿರುವ ಸಮೀರ ಕುಮಾರ್ ಸಾಹು ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.

ಅಧ್ಯಾಪಕನ ವಿರುದ್ಧ ಆಕೆ ಈ ಹಿಂದೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಳು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆಯನ್ನು ಕೂಡ ನಡೆಸಿದ್ದಳು.

ಪ್ರತಿಭಟನೆ ವೇಳೆ ಪ್ರಾಂಶುಪಾಲರು ಹಾಗೂ ಕಾಲೇಜು ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳೂ. ಈ ವೇಳೆ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಆಕೆಯನ್ನು ಉಳಿಸಲು ಯತ್ನಿಸಿದ್ದರು.

ವಿದ್ಯಾರ್ಥಿನಿ ಶೇ. 90 ಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ಭುವನೇಶ್ವರದ ಏಮ್ಸ್‌ಗೆ ಶನಿವಾರ ಕರೆದೊಯ್ಯಲಾಗಿತ್ತು. ತಜ್ಞರ ತಂಡವು ಭುವನೇಶ್ವರದ ಏಮ್ಸ್‌ನ ಸುಟ್ಟಗಾಯಗಳ ಘಟಕದಲ್ಲಿ ಆಕೆಗೆ ಚಿಕಿತ್ಸೆ ನೀಡುತ್ತಿತ್ತು.

"ಬರ್ನ್ಸ್ ಐಸಿಯುನಲ್ಲಿ ಮೂತ್ರಪಿಂಡ ಬದಲಿ ಚಿಕಿತ್ಸೆ ಸೇರಿದಂತೆ ಸಾಕಷ್ಟು ಚಿಕಿತ್ಸೆಗಳನ್ನು ವೈದ್ಯರು ನೀಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾಳೆಂದು ಭುವನೇಶ್ವರದ ಏಮ್ಸ್ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ.. ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ, Congress ಕಾರ್ಯಕರ್ತರು!

ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!

'96 ಲಕ್ಷ ನಕಲಿ ಮತದಾರರ ಸೇರ್ಪಡೆ': ಚುನಾವಣಾ ಆಯೋಗದ ವಿರುದ್ಧ ರಾಜ್ ಠಾಕ್ರೆ ಕಿಡಿ

ಶಿಮ್ಲಾದಲ್ಲಿ ಪಂಚಾಯತ್ ಮುಖ್ಯಸ್ಥನಿಂದ ಬಾಲಕಿ ಮೇಲೆ ಅತ್ಯಾಚಾರ!

SCROLL FOR NEXT