ಘಟನಾ ಸ್ಥಳದಲ್ಲಿ ಪೊಲೀಸರು 
ದೇಶ

ಹೈದರಾಬಾದ್‌: ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು CPI ನಾಯಕನ ಹತ್ಯೆ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ.

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ನಲ್ಲಿ ಮಂಗಳವಾರ ಬೆಳಗ್ಗೆ ಹಾಡಹಗಲೇ ಸಿಪಿಐ ಮುಖಂಡರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಗರದ ಮಲಕಪೇಟೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಕೆ ಚಂದು ನಾಯ್ಕ (47) ಎಂದು ಗುರುತಿಸಲಾಗಿದೆ.

ನಾಯಕ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪರಿಷತ್ ಸದಸ್ಯರಾಗಿದ್ದರು. ಅವರು ಪಾರ್ಕ್ ವೊಂದರ ಬಳಿ ಬೆಳಗಿನ ವಾಕ್ ಮಾಡುತ್ತಿದ್ದಾಗ ಶಸ್ತ್ರಸಜ್ಜಿತ ದಾಳಿಕೋರರು ದಾಳಿ ನಡೆಸಿದ್ದಾರೆ. ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ಸಿಪಿಐ ಮುಖಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಪರಾರಿಯಾಗದಂತೆ ಸಂತ್ರಸ್ಥನ ಕಣ್ಣಿಗೆ ಕಾರದ ಪುಡಿ ಎರಚಿದ್ದಾರೆ ಎಂದು ಸಿಯಾಸತ್ ಡೈಲಿ ವರದಿ ಮಾಡಿದೆ.

ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಾಯ್ಕ್‌ಗೆ ರಾಜೇಶ್ ಎಂಬ ವ್ಯಕ್ತಿಯೊಂದಿಗೆ ದೀರ್ಘಕಾಲದ ದ್ವೇಷವಿತ್ತು ಎಂದು ಅವರ ಪತ್ನಿ ಹೇಳಿಕೊಂಡಿದ್ದಾರೆ ಎಂದು ಮಾಧ್ಯಮ ಸಂಸ್ಥೆ ವರದಿ ಮಾಡಿದೆ.

ಗಮನಾರ್ಹ ಸಂಗತಿ ಎಂದರೆ, ರಾಜೇಶ್ ಕೂಡಾ ಸಿಪಿಐ (ಎಂಎಲ್) ನೊಂದಿಗೆ ಸಂಬಂಧ ಹೊಂದಿದ್ದಾರೆಂದು ವರದಿಯಾಗಿದೆ. ನಾಯ್ಕ್ ಅವರ ಹತ್ಯೆಯು ನಿವಾಸಿಗಳಲ್ಲಿ ಭೀತಿಯನ್ನು ಸೃಷ್ಟಿಸಿದೆ. ಪೊಲೀಸರು ಕೊಲೆಯ ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಈ ಮಧ್ಯೆ ಪ್ರತ್ಯೇಕ ಘಟನೆಯಲ್ಲಿ ರಾಜ್ಯದ ಮೇದಕ್ ಜಿಲ್ಲೆಯ ಕುಲ್ಚರಂ ಮಂಡಲದಲ್ಲಿ ಕಾಂಗ್ರೆಸ್ SC ಘಟಕದ ನಾಯಕ ಮರ್ರೆಲ್ಲಿ ಅನಿಲ್ (28) ಶವ ಪತ್ತೆಯಾಗಿದೆ. ಅವರ ದೇಹದ ಬಳಿ ಗುಂಡುಗಳು ಪತ್ತೆಯಾಗಿವೆ ಎಂದು ತೆಲಂಗಾಣ ಟುಡೇ ವರದಿ ಮಾಡಿದೆ. ಆದರೆ, ಸಾವಿನ ಕಾರಣ ಇನ್ನೂ ದೃಢಪಟ್ಟಿಲ್ಲ. ಅನಿಲ್ ಅವರ ಬಲ ಭುಜ ಮತ್ತು ಎದೆಯ ಮೇಲೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT