ರಾಹುಲ್ ಗಾಂಧಿ File photo | Express
ದೇಶ

'ಹಿಮಂತ ತಾನು ರಾಜ ಅಂದ್ಕೊಂಡಿದ್ದಾರೆ, ಆದರೆ ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗುತ್ತಾರೆ': ರಾಹುಲ್ ಗಾಂಧಿ

ಮುಖ್ಯಮಂತ್ರಿ ತಮ್ಮನ್ನು ತಾವು 'ರಾಜ' ಎಂದು ಭಾವಿಸಿದ್ದಾರೆ ಮತ್ತು ದಿನದ 24 ಗಂಟೆ ನಿಮ್ಮ ಸಂಪತ್ತು, ಭೂಮಿಯನ್ನು ಅದಾನಿ ಹಾಗೂ ಅಂಬಾನಿಗೆ ಹಸ್ತಾಂತರಿಸುವಲ್ಲಿ ನಿರತರಾಗಿದ್ದಾರೆ.

ಚಾಯ್ಗಾಂವ್/ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮನ್ನು ತಾವು 'ರಾಜ' ಅಂದ್ಕೊಂಡಿದ್ದರೂ, ಭ್ರಷ್ಟಾಚಾರಕ್ಕಾಗಿ ಅವರನ್ನು ಜೈಲಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಬಿಜೆಪಿ ಮತ್ತು ಚುನಾವಣಾ ಆಯೋಗ, ಮಹಾರಾಷ್ಟ್ರ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಂದ "ಕದ್ದಿದೆ" ಮತ್ತು ಬಿಹಾರದಲ್ಲಿ ಅದನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಈಶಾನ್ಯ ರಾಜ್ಯದಲ್ಲಿ ಅಂತಹ ಯಾವುದೇ ಪ್ರಯತ್ನವನ್ನು ತಡೆಯಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

"ಮುಖ್ಯಮಂತ್ರಿ ತಮ್ಮನ್ನು ತಾವು 'ರಾಜ' ಎಂದು ಭಾವಿಸಿದ್ದಾರೆ ಮತ್ತು ದಿನದ 24 ಗಂಟೆ ನಿಮ್ಮ ಸಂಪತ್ತು, ಭೂಮಿಯನ್ನು ಅದಾನಿ ಹಾಗೂ ಅಂಬಾನಿಗೆ ಹಸ್ತಾಂತರಿಸುವಲ್ಲಿ ನಿರತರಾಗಿದ್ದಾರೆ. ಆದರೆ ಈಗ ಮುಖ್ಯಮಂತ್ರಿ ಭಯವಾಗುತ್ತಿದೆ. ಟಿವಿಯಲ್ಲಿ ಅವರ ಮುಖವನ್ನು ಹತ್ತಿರದಿಂದ ನೋಡಿ, ಭೀತ ಕಾಣಿಸುತ್ತದೆ" ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಗುವಾಹಟಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಚಾಯ್ಗಾಂವ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ, "ನಿರ್ಭೀತ ಕಾಂಗ್ರೆಸ್ ಕಾರ್ಯಕರ್ತರು ತಮ್ಮನ್ನು ಜೈಲಿಗೆ ಹಾಕುತ್ತಾರೆ ಎಂದು ಹಿಮಂತ ಶರ್ಮಾ ಅವರಿಗೆ ಗೊತ್ತಿದೆ" ಎಂದರು.

ಮುಖ್ಯಮಂತ್ರಿ ಮತ್ತು ಅವರ ಕುಟುಂಬವನ್ನು ಭ್ರಷ್ಟಾಚಾರಕ್ಕೆ ಹೊಣೆಗಾರರನ್ನಾಗಿ ಮಾಡಲಾಗುವುದು. ಮಾಧ್ಯಮಗಳು ಅವರನ್ನು ಜೈಲಿಗೆ ಹಾಕುವುದನ್ನು ತೋರಿಸುತ್ತವೆ ಮತ್ತು ನರೇಂದ್ರ ಮೋದಿ ಅಥವಾ ಅಮಿತ್ ಶಾ ಕೂಡ ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ