ಸಿಎಂ ನಿತೀಶ್ ಕುಮಾರ್ 
ದೇಶ

ಚುನಾವಣೆಗೂ ಮುನ್ನ ಬಿಹಾರ ಜನತೆಗೆ ಜಾಕ್‌ಪಾಟ್; 125 ಯೂನಿಟ್‌ವರೆಗೆ ಉಚಿತ ವಿದ್ಯುತ್; ಸಿಎಂ ನಿತೀಶ್ ಕುಮಾರ್ ಘೋಷಣೆ

ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ ಘೋಷಣೆ ಮಾಡಿರುವ ನಿತೀಶ್ ಕುಮಾರ್ ಅವರು, “ನಾವು ಮೊದಲಿನಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲಾ ಗೃಹಬಳಕೆದಾರರು ಆಗಸ್ಟ್ 1, 2025 ರಿಂದ(ಜುಲೈ ಬಿಲ್ಲಿಂಗ್ ಸೈಕಲ್‌ನಿಂದ ಅನ್ವಯಿಸುತ್ತದೆ) ತಿಂಗಳಿಗೆ 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.

ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ ಘೋಷಣೆ ಮಾಡಿರುವ ನಿತೀಶ್ ಕುಮಾರ್ ಅವರು, “ನಾವು ಮೊದಲಿನಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ, ಆಗಸ್ಟ್ 1, 2025 ರಿಂದ ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್‌ಗಳವರೆಗಿನ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

ಈ ನಿರ್ಧಾರದಿಂದ ರಾಜ್ಯದ ಒಟ್ಟು 1.67 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ, ಈ ಮನೆಗಳ ಒಪ್ಪಿಗೆಯೊಂದಿಗೆ, ಸೌರ ವಿದ್ಯುತ್ ಸ್ಥಾವರಗಳನ್ನು ಅವರ ಮೇಲ್ಛಾವಣಿಗಳಲ್ಲಿ ಅಥವಾ ಹತ್ತಿರದ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

“ಕುಟಿರ್ ಜ್ಯೋತಿ ಯೋಜನೆಯಡಿಯಲ್ಲಿ, ಅತ್ಯಂತ ಬಡ ಕುಟುಂಬಗಳಿಗೆ, ಸೌರ ವಿದ್ಯುತ್ ಒದಗಿಸುವ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಉಳಿದವರಿಗೆ, ಸರ್ಕಾರ ಸೂಕ್ತ ಬೆಂಬಲವನ್ನು ನೀಡುತ್ತದೆ. ಇದರರ್ಥ ಗೃಹಬಳಕೆದಾರರು 125 ಯೂನಿಟ್ ಉಚಿತ ವಿದ್ಯುತ್ ಪಡೆಯುವುದಲ್ಲದೆ, ಮುಂದಿನ ಮೂರು ವರ್ಷಗಳಲ್ಲಿ, ಬಿಹಾರವು 10,000 ಮೆಗಾವ್ಯಾಟ್‌ಗಳವರೆಗೆ ಸೌರಶಕ್ತಿ ಉತ್ಪಾದಿಸುವ ನಿರೀಕ್ಷೆಯಿದೆ” ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಈ ಘೋಷಣೆಯನ್ನು ಸ್ವಾಗತಿಸುತ್ತಾ ಜೆಡಿ(ಯು) ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ನೀರಜ್ ಕುಮಾರ್, “ಉಚಿತ ವಿದ್ಯುತ್ ಒದಗಿಸುವ ನಿತೀಶ್ ಕುಮಾರ್ ಅವರ ನಿರ್ಧಾರವು ಐತಿಹಾಸಿಕ ಮತ್ತು ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ದೆಹಲಿಗೆ ಹೋಗುತ್ತಿರುವುದು ಶಕ್ತಿ ಪ್ರದರ್ಶನಕ್ಕಲ್ಲ,'ವೋಟ್ ಚೋರಿ' ಪ್ರತಿಭಟನೆಗೆ: ಡಿ ಕೆ ಶಿವಕುಮಾರ್, ನಾಳೆ ಸಿಎಂ ಪಯಣ

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!

ತಾಳ್ಮೆ ಕಳೆದುಕೊಂಡು ಪುಟಿನ್-ಎರ್ಡೋಗನ್ ನಡುವಿನ ರಹಸ್ಯ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ; ಮುಂದೇನಾಯ್ತು?, Video!

'ಸಂಸ್ಕೃತದ ವ್ಯಾಕರಣ ಹುಟ್ಟಿದ್ದು ನಮ್ಮಲ್ಲೇ; ನಾವ್ಯಾಕೆ ಸಂಸ್ಕೃತ ಕಲಿಯಬಾರದು'?: Pak ವಿವಿಯಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!

SCROLL FOR NEXT