ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್‌ 
ದೇಶ

ಅಕ್ರಮ ಹಣ ವರ್ಗಾವಣೆ ಆರೋಪ: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್ ಬಂಧನ

ಇಡಿ ಅಧಿಕಾರಿಗಳು ಇಂದು ಬೆಳಗಿನ ಜಾವ ರಾಯ್ಪುರದ ಭಿಲಾಯಿ ಪಟ್ಟಣದಲ್ಲಿರುವ ಭೂಪೇಶ್ ಭಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ರಾಯ್‌ಪುರ: ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಇಡಿ ಅಧಿಕಾರಿಗಳು ಇಂದು ಬೆಳಗಿನ ಜಾವ ರಾಯ್ಪುರದ ಭಿಲಾಯಿ ಪಟ್ಟಣದಲ್ಲಿರುವ ಭೂಪೇಶ್ ಭಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಪ್ರಕರಣ ಸಂಬಂಧ ದಾಖಲೆಗಳು ಲಭ್ಯವಾದ ಬೆನ್ನಲ್ಲೇ ಜಾರಿ ನಿರ್ದೇಶಾನಲಯದ ಅಧಿಕಾರಿಗಳು, ಜಾರಿ ನಿರ್ದೇಶನಾಲಯ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ಪರಿಶೀಲನೆ ಬಳಿಕ ಇದೀಗ ಇಡಿ ಅಧಿಕಾರಿಗಳು ಚೈತನ್ಯ ಭಘೇಲ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಇಡಿ ದಾಳಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭೂಪೇಶ್ ಭಘೇಲ್ ಅವರು, ಇ.ಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇಂದು ವಿಧಾನಸಭೆ ಅಧಿವೇಶದ ಕಡೆಯ ದಿನವಾಗಿದೆ. ಅದಾನಿಗಾಗಿ ತಮ್ನಾರ್‌ನಲ್ಲಿ ಮರಗಳನ್ನು ಕಡಿಯುತ್ತಿರುವ ವಿಚಾರವನ್ನು ಇಂದು ಪ್ರಸ್ತಾಪಿಸಬೇಕಿತ್ತು. ಆದರೆ, ಭಿಲಾಯಿ ನಿವಾಸಕ್ಕೆ 'ಸಾಹೇಬ್' ಇ.ಡಿಯನ್ನು ಕಳುಹಿಸಿದ್ದಾರೆಂದು ಹೇಳಿದ್ದಾರೆ.

ಚೈತನ್ಯ ಬಘೇಲ್ ಅವರ​ ನಿವಾಸದ ಮೇಲೆ ಇ.ಡಿ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ಮಾರ್ಚ್ ತಿಂಗಳಿನಲ್ಲಿಯೂ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.

ಇ.ಡಿ ಆರೋಪದ ಪ್ರಕಾರ, ಛತ್ತೀಸ್​ಗಢ ಮದ್ಯ ಹಗರಣದಿಂದ ರಾಜ್ಯ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಿದೆ. ಇದರಿಂದ, 2,100 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ಆದಾಯ ಗಳಿಸುವ ಮೂಲಕ ಮದ್ಯದ ಸಿಂಡಿಕೇಟ್ ಶ್ರೀಮಂತವಾಗಿದೆ. ಮದ್ಯ ಹಗರಣದ ಆದಾಯವನ್ನು ಚೈತನ್ಯ ಬಘೇಲ್​ ಪಡೆದಿರುವ ಶಂಕೆ ಇದೆ ಎಂದು ಈ ಹಿಂದೆ ಜಾರಿ ನಿರ್ದೇಶನಾಲಯ ತಿಳಿಸಿತ್ತು.

2019 ಮತ್ತು 2022 ರ ನಡುವೆ ಛತ್ತೀಸ್‌ಗಢದಲ್ಲಿ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಕ್ರಮ ನಡೆದಿದ್ದು, ತನಿಖೆಯ ಭಾಗವಾಗಿ ವಿವಿಧ ಆರೋಪಿಗಳಿಂದ ಸುಮಾರು 205 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್