ದೇವೇಂದ್ರ ಫಡ್ನವೀಸ್ TNIE
ದೇಶ

ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಿದ ಮಹಾರಾಷ್ಟ್ರ ಸರ್ಕಾರ

ಮಳೆಗಾಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಈ ಘೋಷಣೆ ಮಾಡಿದರು.

ಸಾಂಗ್ಲಿ: ಮಹಾರಾಷ್ಟ್ರ ಸರ್ಕಾರ, ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಶುಕ್ರವಾರ ಘೋಷಿಸಿದೆ.

ಮಳೆಗಾಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಈ ಘೋಷಣೆ ಮಾಡಿದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಸಂಪುಟದ ಈ ನಿರ್ಧಾರವನ್ನು ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಿದೆ ಎಂದು ಅವರು ಹೇಳಿದರು.

ಹಿಂದೂತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರ ಹೆಸರನ್ನು ಈಶ್ವರಪುರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿ ಸಾಂಗ್ಲಿ ಕಲೆಕ್ಟರೇಟ್‌ಗೆ ಮನವಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಹೆಸರು ಬದಲಾವಣೆಯ ಬೇಡಿಕೆ 1986 ರಿಂದ ಬಾಕಿ ಇತ್ತು ಎಂದು ಇಸ್ಲಾಂಪುರದ ಶಿವಸೇನಾ ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': D K ಶಿವಕುಮಾರ್

ವಾಯುಮಾರ್ಗ ಬಂದ್ ಎಫೆಕ್ಟ್: ದುಬೈಗೆ ಹೊರಟ Emirates ವಿಮಾನ KIAಗೆ ವಾಪಸ್

SCROLL FOR NEXT