ಅಮೃತಸರದಲ್ಲಿರುವ ಸ್ವರ್ಣ ಮಂದಿರ 
ದೇಶ

ಸ್ವರ್ಣ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ: ಪಂಜಾಬ್ ಪೊಲೀಸರಿಂದ ಟೆಕ್ಕಿ ಬಂಧನ

ಪೊಲೀಸರ ಪ್ರಕಾರ, ಕಳೆದ ಐದು ದಿನಗಳಲ್ಲಿ ಏಳು ಇಮೇಲ್‌ಗಳನ್ನು ಕಳುಹಿಸಲಾಗಿದೆ.

ಚಂಡೀಗಢ: ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ(SGPC)ಗೆ RDX ಬಳಸಿ ಅಮೃತಸರದ ಸ್ವರ್ಣ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್‌ ಕಳುಹಿಸಿದ್ದ ಹರಿಯಾಣದ 24 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಪಂಜಾಬ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಕಳೆದ ಐದು ದಿನಗಳಲ್ಲಿ ಏಳು ಇಮೇಲ್‌ಗಳನ್ನು ಕಳುಹಿಸಲಾಗಿದೆ. ಇಮೇಲ್ ವಿಷಯದ ಗಮನಾರ್ಹ ಭಾಗವು ತಮಿಳುನಾಡಿಗೆ ಸಂಬಂಧಿಸಿದೆ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಬಂಧಿತ ಆರೋಪಿ ಹರಿಯಾಣದ ಫರಿದಾಬಾದ್‌ನ ಶುಭಂ ದುಬೆ ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು "ಭಾಗಶಃ ಯಶಸ್ಸು" ಎಂದು ಬಣ್ಣಿಸಿರುವ ಅಮೃತಸರ ಪೊಲೀಸ್ ಆಯುಕ್ತ ಗುರುಪ್ರೀತ್ ಸಿಂಗ್ ಭುಲ್ಲರ್, ದುಬೆ ಬಿಟೆಕ್ ಪದವಿ ಪಡೆದಿದ್ದಾರೆ ಮತ್ತು ಎರಡು ಸಾಫ್ಟ್‌ವೇರ್ ಕಂಪನಿಗಳೊಂದಿಗೆ ಕೆಲಸ ಮಾಡಿದ್ದಾರೆ. ಆದರೆ ಪ್ರಸ್ತುತ ನಿರುದ್ಯೋಗಿಯಾಗಿದ್ದಾರೆ ಎಂದು ತಿಳಿಸಿದರು.

ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಅವರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಕೇಂದ್ರ ಸಂಸ್ಥೆಗಳು ಮತ್ತು ರಾಜ್ಯ ಸೈಬರ್ ಅಪರಾಧ ವಿಭಾಗದ ಸಹಾಯದಿಂದ ಖಚಿತ ಮಾಹಿತಿ ಪಡೆದ ನಂತರ ದುಬೆಯನ್ನು ರಾಜ್ಯ ಪೊಲೀಸರು ಬಂಧಿಸಿ, ಅಮೃತಸರಕ್ಕೆ ಕರೆತಂದಿದ್ದಾರೆ. ಬೆದರಿಕೆ ಇಮೇಲ್‌ಗಳನ್ನು ಕಳುಹಿಸುವಲ್ಲಿ ಅವರ ಪಾತ್ರದ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ಅವರನ್ನು ಪ್ರಶ್ನಿಸಲಾಗುತ್ತಿದೆ. ಪ್ರಕರಣದಲ್ಲಿ ಇದು ಭಾಗಶಃ ಯಶಸ್ಸು. ನಾವು ಇಂಟರ್ನೆಟ್ ಸೇವಾ ಪೂರೈಕೆದಾರರಿಂದ ಮಾಹಿತಿಗಾಗಿ ಕಾಯುತ್ತಿದ್ದೇವೆ ಮತ್ತು ಅದಕ್ಕಾಗಿ ಅವರಿಗೆ ವಿನಂತಿಗಳನ್ನು ಕಳುಹಿಸಿದ್ದೇವೆ. ಇನ್ನೂ ಸಾಕಷ್ಟು ಮಾಹಿತಿ ಬರಬೇಕಿದೆ, ”ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ; ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT