ಸಾಂದರ್ಭಿಕ ಚಿತ್ರ  
ದೇಶ

ಮುಂಬೈಯ ಬಾಂದ್ರಾದಲ್ಲಿ ಮೂರು ಅಂತಸ್ತಿನ ಮಹಲು ಕುಸಿತ; 10 ಜನರು ಸಿಲುಕಿರುವ ಶಂಕೆ

ಇಲ್ಲಿಯವರೆಗೆ ಏಳು ಜನರನ್ನು ಅವಶೇಷಗಳಿಂದ ರಕ್ಷಿಸಿ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಮುಂಬೈ: ವಾಣಿಜ್ಯ ನಗರ ಮುಂಬೈಯ ಪಶ್ಚಿಮ ಉಪನಗರ ಬಾಂದ್ರಾದಲ್ಲಿ ಮೂರು ಅಂತಸ್ತಿನ ವಠಾರ ಕುಸಿದಿದ್ದು, ಕನಿಷ್ಠ 10 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ ಏಳು ಜನರನ್ನು ಅವಶೇಷಗಳಿಂದ ರಕ್ಷಿಸಿ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಂದ್ರಾ ಪೂರ್ವದ ಭಾರತ್ ನಗರ ಪ್ರದೇಶದ ವಠಾರ ಸಂಖ್ಯೆ 37 ಬೆಳಗ್ಗೆ 5.56 ರ ಸುಮಾರಿಗೆ ಕುಸಿದಿದೆ. ಎಂಟು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ, ಮುಂಬೈ ಪೊಲೀಸ್ ಮತ್ತು ಬೃಹನ್ಮುಂಬೈ ಮಹಾನಗರ ಪಾಲಿಕೆ ಸ್ಥಳೀಯ ವಾರ್ಡ್ ಯಂತ್ರೋಪಕರಣಗಳ ತಂಡಗಳೊಂದಿಗೆ ಸ್ಥಳದಲ್ಲಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT